ಪ್ರವಾಸಿ ಸ್ಥಳಗಳಿಗೆ ಹೋಗಲೇಬೇಡಿ; ಪೊಲೀಸ್ ಇಲಾಖೆಯ ಎಚ್ಚರಿಕೆಅಣೆಕಟ್ಟು, ನದಿ, ಜಲಪಾತಗಳ ಬಳಿ ನಿಷೇಧ!

ಪ್ರವಾಸಿ ಸ್ಥಳಗಳಿಗೆ ಹೋಗಲೇಬೇಡಿ; ಪೊಲೀಸ್ ಇಲಾಖೆಯ ಎಚ್ಚರಿಕೆ

ಅಣೆಕಟ್ಟು, ನದಿ, ಜಲಪಾತಗಳ ಬಳಿ ನಿಷೇಧ!

ಜಿಲ್ಲೆಯಾದ್ಯಂತ *ಮುಂಗಾರು ಮಳೆ ತೀವ್ರಗೊಂಡಿದ್ದು,* ಇದರಿಂದಾಗಿ ನದಿಗಳು, ಹಳ್ಳಗಳು ತುಂಬಿ, *ಅಪಾಯಮಟ್ಟವನ್ನು ತಲುಪಿ ಹರಿಯುತ್ತಿದ್ದು, ಸಾರ್ವಜನಿಕರ ಹಿತದೃಷ್ಠಿಯಿಂದ* ಅಣೆಕಟ್ಟುಗಳು, ಜಲಪಾತಗಳು ಮತ್ತು ನದಿ ನೀರಿಗೆ ಇಳಿಯುವುದು, *ಈಜಾಡುವುದು ಮತ್ತು ಸೆಲ್ಫಿಗಳನ್ನು ತೆಗೆದುಕೊಳ್ಳುವುದನ್ನು ಹಾಗೂ ಈ ರೀತಿಯ ಅಪಾಯಕಾರಿ ಪ್ರವಾಸಿ ತಾಣಗಳಿಗೆ* ಸಾರ್ವಜನಿಕರ ಭೇಟಿಯನ್ನು ನೀರಿನ ಹರಿವು ಕಡಿಮೆಯಾಗುವವರೆಗೆ *ಸಂಭಂದಪಟ್ಟ ಇಲಾಖೆಗಳಿಂದ ನಿಷೇದಿಸಲಾಗಿರುತ್ತದೆ.*

ಈ ಬಗ್ಗೆ ಈಗಾಗಲೇ *ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಸೂಚನಾ ಫಲಕಗಳನ್ನು ಅಳವಡಿಸಿ* ಸಿಬ್ಬಂಧಿಗಳನ್ನು ನಿಯೋಜಿಸಲಾಗಿರುತ್ತದೆ. ಆದ್ದರಿಂದ ಸಾರ್ವಜನಿಕರು ನೀರಿನ ಹರಿವು ಕಡಿಮೆಯಾಗುವವರೆಗೆ *ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡದೇ ಸಹಕರಿಸಲು ಮತ್ತು ತುರ್ತು ಸಂದರ್ಭಗಳಲ್ಲಿ ಸಹಾಯಕ್ಕಾಗಿ 112 ಸಹಾಯವಾಣಿಗೆ ಕರೆ ಮಾಡಲು* ಕೋರಿದೆ.