ಗ್ಯಾರಂಟಿ ಸಮಿತಿ ಬಸವರಾಜ್ ಮನವಿಗೆ ಸ್ಪಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್;**ಹತ್ತು ದಿಗಳಲ್ಲಿ ಮಹಿಳೆಯರ ಅಕೌಂಟಿಗೆ ಹಣ*
*ಗ್ಯಾರಂಟಿ ಸಮಿತಿ ಬಸವರಾಜ್ ಮನವಿಗೆ ಸ್ಪಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್;*
*ಹತ್ತು ದಿಗಳಲ್ಲಿ ಮಹಿಳೆಯರ ಅಕೌಂಟಿಗೆ ಹಣ*
ಕಾಂಗ್ರೆಸ್ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಹಣ ಎರಡು ತಿಂಗಳುಗಳಿಂದ ಫಲಾನುಭವಿ ಮಹಿಳೆಯರಿಗೆ ತಲುಪಿಲ್ಲ.ಕೂಡಲೇ ಹಣ ಬಿಡುಗಡೆ ಮಾಡಿ ಎಂದು ಶಿವಮೊಗ್ಗ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನೂತನ ಸದಸ್ಯರಾದ ಎಸ್.ಬಸವರಾಜ್ ವಿಧಾನಸಭೆಯಲ್ಲಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಗಮನಕ್ಕೆ ತಂದಾಗ, ಅವರು ಮುಂದಿನ ಹತ್ತು ದಿನಗಳಲ್ಲಿ ಎರಡು ತಿಂಗಳ ಗೃಹಲಕ್ಷ್ಮೀ ಹಣ ಒಟ್ಟಿಗೆ ತಲುಪಿಸಲಾಗುವುದು ಎಂದು ಭರವಸೆ ನೀಡಿದರು.
ಫಲಾನುಭವಿಗಳು ಗೃಹಲಕ್ಷ್ಮೀ ಹಣ ತಲುಪದೇ ತೊಂದರೆಯಲ್ಲಿದ್ದಾರೆ. ಅವರನ್ನು ಭೇಟಿ ಮಾಡಿದಾಗ ತೀವ್ರ ತೊಂದರೆಗಳನ್ನು ಹೇಳಿಕೊಳ್ಳುತ್ತಿದ್ದಾರೆ ಎಂದು ಸದಸ್ಯ ಬಸವರಾಜ್ ವಿಧಾನಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗಮನ ಸೆಳೆದರು.
ಇದಕ್ಕೆ ಸ್ಪಂದಿಸಿದ ಸಚಿವೆ ಹೆಬ್ಬಾಳ್ಕರ್ ರವರು, ಹತ್ತು ದಿನಗಳಲ್ಲಿ ಸಮಸ್ಯೆ ಬಗೆಹರಿಸಲಾಗುವುದು. ಸರ್ವರ್ ಸಮಸ್ಯೆ ಇದ್ದುದರಿಂದ ಮಹಿಳೆಯರಿಗೆ ಸೂಕ್ತ ಸಮಯದಲ್ಲಿ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ಈಗ ಹಣ ಬಿಡುಗಡೆ ಮಾಡಲು ಯಾವುದೇ ಸಮಸ್ಯೆ ಇಲ್ಲ ಎಂದು ಭರವಸೆ ನೀಡಿದ್ದಾರೆಂದು ಬಸವರಾಜ್ ತಿಳಿಸಿದರು.