ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್? ಬಿಗ್ ರಿಲೀಫ್ ನೀಡಿದೆ. ಹೈಕೋರ್ಟ್? ಮಹತ್ವದ ಆದೇಶದಿಂದಾಗಿ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮತ್ತೆ ಬಂಧನದಿಂದ ಬಚಾವ್ ಆಗಿದ್ದಾರೆ.
ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಹೈಕೋರ್ಟ್ ಮತ್ತೆ ಬಿಗ್ ರಿಲೀಫ್ ನೀಡಿದೆ. ತಮ್ಮ ವಿರುದ್ಧ ದಾಖಲಾದ ಪೋಕ್ಸೊ ಪ್ರಕರಣವನ್ನು ರದ್ದು ಕೋರಿ ಬಿಎಸ್?ವೈ ಸಲ್ಲಿಸಿದ್ದ ಅರ್ಜಿಯನ್ನು ಇಂದು (ಜುಲೈ ೨೬) ಕೈಗೆತ್ತಿಕೊಂಡ ಹೈಕೋರ್ಟ್, ವಿಚಾರಣೆಯನ್ನು ಒಂದು ವಾರ ಮುಂದೂಡಿದೆ. ಅಲ್ಲದೇ ಈ ಹಿಂದೆ ಬಂಧಿಸದಂತೆ ನೀಡಿದ್ದ ಮಧ್ಯಂತರ ಆದೇಶವನ್ನು ವಿಸ್ತರಣೆ ಮಾಡಿದೆ. ಇದರೊಂದಿಗೆ ಯಡಿಯೂರಪ್ಪ ಮತ್ತೆ ಬಂಧನದ ಭೀತಿಯಿಂದ ಬಚಾವ್ ಆಗಿದ್ದಾರೆ.