ಕಾಗೋಡಜ್ಜನ ಆರೋಗ್ಯ ವಿಚಾರಿಸಿದ ಸಚಿವ ಮಧು ಬಂಗಾರಪ್ಪ

ಕಾಗೋಡಜ್ಜನ ಆರೋಗ್ಯ ವಿಚಾರಿಸಿದ ಸಚಿವ ಮಧು ಬಂಗಾರಪ್ಪ

ಅನಾರೋಗ್ಯದ ಕಾರಣದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ವಿಧಾನಸಭಾ ಅಧ್ಯಕ್ಷರಾದ ಕಾಗೋಡು ತಿಮ್ಮಪ್ಪನವರನ್ನು ಭೇಟಿಯಾದ ಶಿಕ್ಷಣ ಮತ್ತು ಸಾಕ್ಷರತಾ ಸಚಿವರ ಮಧು ಬಂಗಾರಪ್ಪರವರು, ಅವರ ಆರೋಗ್ಯ ವಿಚಾರಿಸಿ, ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು.
ಶರಾವತಿ ಮುಳುಗಡೆ ಸಂತ್ರಸ್ತರ ಹಾಗೂ ಬಗರ್ ಹುಕುಂ ರೈತರ ಸಮಸ್ಯೆಗಳ ಬಗ್ಗೆ ಇತ್ತೀಚೆಗೆ ನಡೆದ ರಾಜಕೀಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಬಲ್ಕೀಶ್ ಬಾನು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್, ಕಾಂಗ್ರೆಸ್ ಮುಖಂಡರಾದ ಕಲಗೋಡು ರತ್ನಾಕರ್, ಜಿ.ಡಿ.ಮಂಜುನಾಥ್ ಉಪಸ್ಥಿತರಿದ್ದರು.