ಶಿವಮೊಗ್ಗದ ಎನ್‌ಯು ಆಸ್ಪತ್ರೆಯಲ್ಲಿ ವಿಭಿನ್ನ ರಕ್ತದ ಗುಂಪಿನ ವ್ಯಕ್ತಿಗೆ ಕಿಡ್ನಿ ಟ್ರಾನ್ಸ್ ಪ್ಲಾಂಟ್ ಚಿಕಿತ್ಸೆ ಯಶಸ್ವಿಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಎನ್ ಯು ಆಸ್ಪತ್ರೆ ವೈದ್ಯರು
ಶಿವಮೊಗ್ಗದ ಎನ್‌ಯು ಆಸ್ಪತ್ರೆಯಲ್ಲಿ ವಿಭಿನ್ನ ರಕ್ತದ ಗುಂಪಿನ ವ್ಯಕ್ತಿಗೆ ಕಿಡ್ನಿ ಟ್ರಾನ್ಸ್ ಪ್ಲಾಂಟ್ ಚಿಕಿತ್ಸೆ ಯಶಸ್ವಿ
ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಎನ್ ಯು ಆಸ್ಪತ್ರೆ ವೈದ್ಯರು
ವಿಭಿನ್ನ ರಕ್ತದ ಗುಂಪಿನ ವ್ಯಕ್ತಿಗೆ ಕಿಡ್ನಿ ಟ್ರಾನ್ಸ್ಪ್ಯಾಂಟ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಶಿವಮೊಗ್ಗದ ಎನ್ ಯು ವಾಸ್ಪಿಟಲ್ಸ್ ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ತರ ಸಾಧನೆಯನ್ನು ಮಾಡಿದೆ. 65 ವರ್ಷ ವಯಸ್ಸಿನ ಅಜ್ಜಿ 21 ವರ್ಷದ ಮೊಮ್ಮಗಳಿಗೆ ತನ್ನ ಮೂತ್ರಪಿಂಡವನ್ನು ದಾನ ಮಾಡಿದ್ದಾರೆ. ಈ ಪ್ರಕರಣದಲ್ಲಿ ಎನ್‌ಯು ಆಸ್ಪತ್ರೆಯ ಹೆಗ್ಗಳಿಕೆಯೆಂದರೆ ದಾನಿಯ ಹಾಗೂ ರೋಗಿಯ ರಕ್ತದ ಗುಂಪು ಬೇರೆ ಬೇರೆಯಾಗಿತ್ತು. ಇದನ್ನು ಸವಾಲಾಗಿ ಸ್ವೀಕರಿಸಿ ನವೀನ ತಂತ್ರಜ್ಞಾನಗಳನ್ನು ಬಳಸಿ ಚಿಕಿತ್ಸೆಯನ್ನು ಎನ್‌ಯು ಆಸ್ಪತ್ರೆ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಮಲೆನಾಡು ಭಾಗದಲ್ಲಿ ಪ್ರಪ್ರಥಮ ಬಾರಿಗೆ ಕೈಗೊಂಡ ಯಶಸ್ಸಿ ಶಸ್ತ್ರಚಿಕಿತ್ಸೆ ಇದಾಗಿದ್ದು, ಇದರ ಕೀರ್ತಿ ಎನ್‌ಯು ಆಸ್ಪತ್ರೆಗೆ ಸಲ್ಲುತ್ತದೆ. ಈ ಮೂಲಕ ಶಿವಮೊಗ್ಗದ ಎನ್ ಆಸ್ಪತ್ರೆಯು ಮೂತ್ರಪಿಂಡ ಸಂಬಂಧಿತ ಕಾಯಿಲೆಗಳುಳ್ಳ ರೋಗಿಗಳಿಗೆ ಭರವಸೆಯ ದಾರಿದೀಪವಾಗಿದೆ.
ಯುವತಿಯು (ರೋಗಿ) ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದಳು. ಮೇ 2023ರಲ್ಲಿ ಆಕೆಗೆ ಕಿಡ್ನಿ ಸಮಸ್ಯೆ ಇರುವುದನ್ನು ವೈದ್ಯರು ದೃಢಪಡಿಸಿದ್ದರು. ಆಕೆಗೆ 2023ರ ಡಿಸೆಂಬರ್ ನಲ್ಲಿ ಡಯಾಲಿಸಿಸ್ ಪ್ರಕ್ರಿಯೆಯನ್ನು ವೈದ್ಯರು ಪ್ರಾರಂಭಿಸಿದ್ದಾರೆ. ರೋಗಿಗೆ ವಾರಕ್ಕೆ ಮೂರು ಬಾರಿ ಡಯಾಲಿಸಿಸ್ ಮಾಡಲಾಗುತ್ತಿತ್ತು. ಇದನ್ನು ಮನಗಂಡ ಆಕೆಯ ಅಜ್ಜಿ ಕಿಡ್ನಿ ನೀಡಲು ಮುಂದಾದರು. ಅಜ್ಜಿ ಹಾಗೂ ಮೊಮ್ಮಗಳು ಇಬ್ಬರೂ ವಿಭಿನ್ನ ರಕ್ತದ ಗುಂಪನ್ನು ಹೊಂದಿದ್ದರೂ ಕೂಡ ಹಲವಾರು ಸವಾಲುಗಳ ನಡುವೆಯೇ ಚಿಕಿತ್ಸೆಯನ್ನು 2024ರ ಏಪ್ರಿಲ್‌ನಲ್ಲಿ ಕೈಗೊಳ್ಳಲಾಯಿತು.
ಶಿವಮೊಗ್ಗದ ಎನ್‌ಯು ಆಸ್ಪತ್ರೆಯ ಖ್ಯಾತ ಯುರಾಲಜಿಸ್ಟ್ ಮತ್ತು ಟ್ರಾನ್ಸ್‌ಪ್ಲಾಂಟ್ ಶಸ್ತ್ರಚಿಕಿತ್ಸಾ ತಜ್ಞರಾದ ಡಾ.ಪುದೀಪ್ ಎಮ್ ಜಿ. ಡಾ. ಪ್ರವೀಣ್ ಮಾಳವದೆ (ಅಸೋಸಿಯೇಟ್ ಮೆಡಿಕಲ್ ಡೈರೆಕ್ಟರ್ ಅಂಡ್ ಟ್ರಾನ್ಸ್ ಪ್ಲಾಂಟ್ ಫಿಸಿಷಿಯನ್) ಹಾಗೂ ಅರವಳಿಕೆ ತಜ್ಞರಾದ ಡಾ. ಕಾರ್ತಿಕ್ ಮತ್ತು ಡಾ. ಅನುಷಾ ಅವರ ಬೆಂಬಲದೊಂದಿಗೆ ಸಂಕೀರ್ಣ ಕಿಡ್ನಿ ಟ್ರಾನ್ಸ್‌ಪ್ಲಾಂಟ್ ವಿಧಾನವನ್ನು ನಿಖರವಾಗಿ ಯೋಜಿಸಿ ಕಾರ್ಯಗತಗೊಳಿಸಲಾಗಿದೆ. ರೋಗಿಯಲ್ಲಿ ಆಕೆಯ ಅಜ್ಜಿಯಿಂದ ಪಡೆದ ಮೂತ್ರಪಿಂಡವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮಲೆನಾಡಿಗರ ಪಾಲಿಗೆ ಇದೊಂದು ಸಂತಸದ ಸುದ್ದಿ ಎನ್ನಬಹುದು.
ಈ ಕುರಿತಂತೆ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ಎನ್‌ಯು ಆಸ್ಪತ್ರೆಯ ವೈದ್ಯ ಡಾ. ಪ್ರವೀಣ್ ಮಾಳವದೆ (ಅಸೋಸಿಯೇಟ್ ಮೆಡಿಕಲ್ ಡೈರೆಕ್ಟರ್ ಅಂಡ್ ಟ್ರಾನ್ಸ್ ಪ್ಲಾಂಟ್ ಫಿಸಿಷಿಯನ್) ಅವರು ಮಾತನಾಡಿ, ‘ಈ ಪ್ರಕರಣವು ಕಿಡ್ನಿ ಟ್ರಾನ್ಸ್ ಪ್ಲಾಂಟ್ ಚಿಕಿತ್ಸೆಯಲ್ಲಿನ ಹೊಸ ಸಾಧ್ಯತೆಗಳ ಜೊತೆಗೆ ಕೌಟುಂಬಿಕ ಪ್ರೀತಿ ಮತ್ತು ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ. ಇದರ ಜೊತೆಗೆ ನಮ್ಮ ತಂಡದ ಸಮರ್ಪಣೆ ಮತ್ತು
ನಿರಂತರ ಪ್ರಯತ್ನಗಳಿಂದ ವಿಭಿನ್ನ ರಕ್ತದ ಗುಂಪಿನ ವ್ಯಕ್ತಿಗೆ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿಸಲಾಯಿತು’ ಎಂದರು.
ಈ ಯಶಸ್ವಿ ಚಿಕಿತ್ಸೆಯು ಯುವತಿಯ ಜೀವವನ್ನು ಉಳಿಸಿದ್ದು ಮಾತ್ರವಲ್ಲದೆ ಮಲೆನಾಡು ಭಾಗದಲ್ಲಿ ಮೂತ್ರಪಿಂಡದ ಸಮಸ್ಯೆ ಹೊಂದಿರುವವರಿಗೆ ಹೊಸ ಆಶಾಕಿರಣವಾಗಿದೆ. ಈ ಯಶಸ್ಸಿನ ಮೂಲಕ ಶಿವಮೊಗ್ಗ, ಉತ್ತರಕನ್ನಡ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಪ್ರದೇಶಗಳಲ್ಲಿ ಕಿಡ್ನಿ ಸಮಸ್ಯೆ ಹೊಂದಿರುವವರಿಗೆ ಅತ್ಯುತ್ತಮ ಚಿಕಿತ್ಸೆ ನೀಡುವ ಮೂಲಕ ತನ್ನ ಬದ್ಧತೆಯನ್ನು ಕಾಪಾಡಿಕೊಳ್ಳುವುದರ ಜೊತೆಗೆ ಪ್ರತಿ ವ್ಯಕ್ತಿಯು ಗುಣಮಟ್ಟದ ಆರೈಕೆ ಮತ್ತು ಆರೋಗ್ಯ ಸೇವೆಯನ್ನು ಪಡೆಯಲು ಅರ್ಹ ಎಂಬುದನ್ನ ಖಾತರಿಪಡಿಸಿದೆ.
ಎನ್‌ಯು ಆಸ್ಪತ್ರೆಯು ಮೂತ್ರಪಿಂಡಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಅತ್ಯುತ್ತಮ ಚಿಕಿತ್ಸೆ ನೀಡುವಲ್ಲಿ ನಿರಂತರವಾಗಿ ಸಫಲವಾಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ಗುಣಮಟ್ಟದ ಆರೈಕೆ ಮತ್ತು ಸೂಕ್ತ ಔಷಧ ಪದ್ಧತಿಗಳನುಸಾರ ಸಮಾನ ಚಿಕಿತ್ಸೆಯನ್ನು ಪಡೆಯುತ್ತಾನೆ ಎಂದು ಖಾತ್ರಿಪಡಿಸುತ್ತಿದೆ.
ಹೆಚ್ಚಿನ ಮಾಹಿತಿಗಾಗಿ ದಯವಿಟ್ಟು ಸಂಪರ್ಕಿಸಿ: 6364409651, 6364466240
ಶಿವಮೊಗ್ಗದ ಎನ್‌ಯು ಆಸ್ಪತ್ರೆ:
ಎನ್ ಯು ಆಸ್ಪತ್ರೆಯು ಮೂತ್ರಪಿಂಡ ಮತ್ತು ಮೂತ್ರಶಾಸ್ತ್ರ ಆರೈಕೆಯಲ್ಲಿ ಪರಿಣತಿ ಹೊಂದಿದ ಪ್ರಮುಖ ಆರೋಗ್ಯ ಕೇಂದ್ರವಾಗಿದೆ. ಮಲೆನಾಡು ಪ್ರದೇಶದಲ್ಲಿ ಜನರ ಕ್ಷೇಮವನ್ನು ಹೆಚ್ಚಿಸಲು ಸಮಗ್ರ ಮತ್ತು ಸಹಾನುಭೂತಿಯ ಸೇವೆಗಳನ್ನು ಒದಗಿಸುತ್ತಿದೆ. ಈ ಆಸ್ಪತ್ರೆಯು ತನ್ನ ಅತ್ಯಾಧುನಿಕ ಸೌಲಭ್ಯಗಳು, ತಜ್ಞ ವೈದ್ಯಕೀಯ ವೃತ್ತಿಪರರು ಮತ್ತು ರೋಗಿಗಳ ಕೇಂದ್ರಿತ ಚಿಕಿತ್ಸಾ ವಿಧಾನಕ್ಕೆ ಹೆಸರುವಾಸಿಯಾಗಿದೆ.