ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ

ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ

ಶಿವಮೊಗ್ಗ: ನಗರದ ಡೆಲ್ಲಿ ವರ್ಡ್ ಶಾಲೆಯಲ್ಲಿ  ಶನಿವಾರ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಚಲನಚಿತ್ರ ನಿರ್ಮಾಪಕರು ಮತ್ತು ಸೃಜನಾಶೀಲ ಪ್ರತಿಭೆಗಳನ್ನು ಹೊರ ಹಾಕುವ ಮತ್ತು ಪ್ರದರ್ಶಿಸುವ ಗುರಿಯೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದು ಶಾಲೆಯ ಪ್ರಾಚಾರ್ಯೆ ದಿವ್ಯ ಶೆಟ್ಟಿ ಹೇಳಿದರು.

ನಗರದ ಪ್ರತಿಷ್ಠಿತ ಶಾಲೆಯ ಸುಮಾರು 15ಕ್ಕೂ ಹೆಚ್ಚು ಖಾಸಗಿ ಶಾಲೆ ಮತ್ತು ಸರ್ಕಾರಿ ಶಾಲೆ ಮಕ್ಕಳು ಸೇರಿದಂತೆ ಒಟ್ಟು 2,000 ಕ್ಕೂ ಹೆಚ್ಚು ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಶಿಕ್ಷಕರು, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.