ಮನೆಯಲ್ಲೇ ವೇಶ್ಯಾವಾಟಿಕೆ ನಡೆಸುತ್ತಿದ್ದ ಶಿಕ್ಷಕಿ!ಅರೆಸ್ಟ್- ಅರೆಸ್ಟ್- ಅರೆಸ್ಟ್…
ಮನೆಯಲ್ಲೇ ವೇಶ್ಯಾವಾಟಿಕೆ ನಡೆಸುತ್ತಿದ್ದ ಶಿಕ್ಷಕಿ!
ಅರೆಸ್ಟ್- ಅರೆಸ್ಟ್- ಅರೆಸ್ಟ್…
ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಗ್ರಾಮವೊಂದರಲ್ಲಿ ಶಿಕ್ಷಕಿಯೋರ್ವಳು ತನ್ನ ಮನೆಯಲ್ಲಿಯೇ ವೇಶ್ಯಾವಾಟಿಕೆ ನಡೆಸುತ್ತಿದ್ದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಸದ್ಯ ಸರ್ಕಾರಿ ಶಾಲಾ ಶಿಕ್ಷಕಿ ಹಾಗೂ ಓರ್ವ ವ್ಯಕ್ತಿಯನ್ನು ಅರೆಸ್ಟ್ ಮಾಡಿದ್ದಾರೆ. .
ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಶಿಕ್ಷಕಿ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಶಿಕ್ಷಕಿ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಳು. ಅಲ್ಲದೇ ತನ್ನ ಮನೆಯಲ್ಲಿ ಶಿಕ್ಷಕಿ ವೇಶ್ಯಾವಾಟಿಕೆ ನಡೆಸುತ್ತಿದ್ದಳು. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಈ ವೇಳೆ ಶಿಕ್ಷಕಿ ವೇಶ್ಯಾವಾಟಿಕೆ ನಡೆಸುತ್ತಿರುವುದು ಗೊತ್ತಾಗಿದೆ.
ಈ ಹಿನ್ನೆಲೆಯಲ್ಲಿ ಶಿಕ್ಷಕಿ ಹಾಗೂ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಓರ್ವ ಯುವತಿಯನ್ನು ರಕ್ಷಿಸಿದ್ದಾರೆ.
ಘಟನೆಯ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.