ತಂಬಾಕು ದಾಳಿ : ದಂಡ ಸಂಗ್ರಹ*
*ತಂಬಾಕು ದಾಳಿ : ದಂಡ ಸಂಗ್ರಹ*
ಸೊರಬ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸುತ್ತಮುತ್ತ ಹಾಗೂ ಬಸ್ ನಿಲ್ದಾಣದಲ್ಲಿ ಕೋಟ್ಪಾ ಕಾಯ್ದೆಯನ್ನು ಉಲ್ಲಂಘಿಸಿದವರ ವಿರುದ್ಧ ದಾಳಿಯನ್ನು ಹಮ್ಮಿಕೊಳ್ಳಲಾಯಿತು.
ಒಟ್ಟು 12 ಪ್ರಕರಣಗಳನ್ನು ದಾಖಲಿಸಿ ರೂ. 2300 ದಂಡವನ್ನು ಸ್ಥಳದಲ್ಲಿಯೇ ಸಂಗ್ರಹಿಸಲಾಯಿತು. ತಂಡದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ಹೇಮಂತ್ ರಾಜ್ ಅರಸ್, ಶಿವಮೊಗ್ಗ, ಸಮಾಜ ಕಾರ್ಯಕರ್ತ ರÀವಿರಾಜ್, ಸೊರಬ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಶಬೀರ್, ಆರೋಗ್ಯ ಇಲಾಖೆಯ ಆರೋಗ್ಯ ನಿರೀಕ್ಷಣಾಧಿಕಾರಿ ಅಕ್ಷಯ್ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.
(ಫೋಟೊ ಇದೆ)