ವಕ್ಫ್ ಮಸೂದೆ ಕೂಡಲೇ ಹಿಂಪಡೆಯಲು ಆಗ್ರಹಿಸಿಎಸ್ ಡಿ ಪಿ ಐ ಪ್ರತಿಭಟನೆ

ವಕ್ಫ್ ಮಸೂದೆ ಕೂಡಲೇ ಹಿಂಪಡೆಯಲು ಆಗ್ರಹಿಸಿ

ಎಸ್ ಡಿ ಪಿ ಐ ಪ್ರತಿಭಟನೆ

ವಕ್ಫ್ ಮಸೂದೆ ಹಿಂಪಡೆಯಲು ಆಗ್ರಹಿಸಿ ಎಸ್.ಡಿ.ಪಿ.ಐ. ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ವಕ್ಫ್ ಮಸೂದೆ ೨೦೨೪ನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿದೆ. ಮುಸ್ಲಿಂ ಸಮುದಾಯದ ಕ್ಷೇಮಾಭಿವೃದ್ಧಿಗೆ ಇರುವ ವಕ್ಫ್ ಆಸ್ತಿಗಳನ್ನು ಕಸಿದುಕೊಳ್ಳುವ ಹುನ್ನಾರ ಬಿಜೆಪಿ ಪಕ್ಷದ ಅಜೆಂಡಾವಾಗಿದೆ. ಇದು ಜಾತ್ಯಾತೀತ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.
ಈ ಕಾಯ್ದೆ ಸಾಮಾನ್ಯ ಕಾನೂನು ನಿಯಮಕ್ಕೆ ವಿರುದ್ದವಾಗಿದೆ. ಮತ್ತು ಉಲ್ಲಂಘನೆಯಾಗಿದೆ. ಹಿಂದೂಗಳಲ್ಲದ ಬೌದ್ಧರು, ಜೈನರು, ಸಿಖ್ಖರ್ ಇವರಿಗೂ ಸಹ ದೇವಸ್ಥಾನದ ಆಡಳಿತದ ಸದಸ್ಯತ್ವವನ್ನು ನಿಷೇದಿಸಲಾಗಿದೆ,  ಹಿಂದೂಗಳನ್ನು ವಕ್ಫ್ ಮಂಡಳಿಗಳಿಗೆ ಸದಸ್ಯರಾಗಿ ಜವಬ್ದಾರಿ ನೀಡುವುದು ಸಂಪೂರ್ಣ ತಾರತಮ್ಯದಿಂದ ಕೂಡಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ವಕ್ಫ್ ಅಧಿಕಾರ ವ್ಯಾಪ್ತಿಯಿಂದ ಶತ್ರುಗಳ ಆಸ್ತಿಗಳೆಂದು ಪರಿಗಣಿಸಿ ಸದರಿ ಆಸ್ತಿಗಳನ್ನು ವಕ್ಫ್ ನಿಯಂತ್ರಣದಿಂದ ಹೊರಗಿಡುವುದು ದೊಡ್ಡ ಪ್ರಮಾಣದ ಹಾನಿಯನ್ನು ಉಂಟುಮಾಡುತ್ತದೆ. ಆದ್ದರಿಂದ ಸಮಾಜದ ಹಾಗೂ ದೇಶದ ಹಿತದೃಷ್ಟಿಯಿಂದ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಪತ್ರಿಭಟನೆಯಲ್ಲಿ ಎಸ್‌ಡಿಪಿಐನ ಜಿಲ್ಲಾಧ್ಯಕ್ಷ ಇಮ್ರಾನ್ ಅಹಮ್ಮದ್, ಪ್ರಮುಖರಾದ ಇಸಾಕ್ ಅಹಮ್ಮದ್, ಫೈರೋಜ್, ಸಲೀಂ, ರಹೀಂ ಸೇರಿದಂತೆ ಹಲವರಿದ್ದರು.