Warning: ftp_nlist() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 492

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 284

Warning: ftp_mkdir() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 642

Warning: ftp_nlist() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 492

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 284

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ

ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್​​ ಅನ್ನು ಹೈಕೋರ್ಟ್​ ಎತ್ತಿ ಹಿಡಿದಿತ್ತು. ಮುಡಾ ಹಗರಣದ ಕುರಿತು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್​ ಅನ್ನು ಹೈಕೋರ್ಟ್​ ಎತ್ತಿ ಹಿಡಿದಿತ್ತು. ಈಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ಆದೇಶ ನೀಡಿದೆ. ಹಗರಣ ಸಂಬಂಧ ಆರು ವಾರಗಳ ಒಳಗಾಗಿ ಸಿಆರ್​ಪಿಸಿ ಸೆ.156(3) ಅಡಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರದ ಬಗ್ಗೆ ತನಿಖೆಯ ಅಗತ್ಯವಿದೆ ಎಂದು ಮೈಸೂರಿನ ಸ್ನೇಹಮಯಿ ಕೃಷ್ಣ ಮತ್ತು ಟಿಜೆ ಅಬ್ರಾಹಂ ಸಲ್ಲಿಸಿದ್ದ ಖಾಸಗಿ ದೂರುಗಳ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿತು.

ರಾಜ್ಯಪಾಲರ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್​ನಲ್ಲಿ ಪ್ರಶ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್​ ತನ್ನ ವಿಚಾರಣೆ ಮುಕ್ತಾಯವಾಗುವವರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು. ಮಂಗಳವಾರ ಹೈಕೋರ್ಟ್​ ತೀರ್ಪು ಪ್ರಕಟಗೊಂಡ ಹಿನ್ನೆಲೆಯಲ್ಲಿ, ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಆರ್​ಪಿಸಿ ಕಾಯ್ದೆ ಉಲ್ಲೇಖಿಸಿ ತೀರ್ಪು ನೀಡಿದೆ.