ಅನಾಹುತಕಾರಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 20 ಲಕ್ಷ ರೂ., ದಂಡ!ಅಗತ್ಯ ಮಾನದಂಡವಿಲ್ಲಸುರಕ್ಷತೆ ಕ್ರಮ ಕೈಗೊಳ್ಳಲಾಗುತ್ತಿಲ್ಲರಕ್ಷಣಾ ಉಡುಪು ಇಲ್ಲಅಗ್ನಿಶಾಮಕ ಸಿಬ್ಬಂದಿಯೂ ಕಡಿಮೆಕ್ರಾಶ್ ಫೈರ್, ಟೆಂಡರ್ ಫೈರ್ ಇಂಜಿನ್ ನಿರ್ವಹಣೆಗೆ ಸಿಬ್ಬಂದಿಯೇ ಇಲ್ಲ…

ಅನಾಹುತಕಾರಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 20 ಲಕ್ಷ ರೂ., ದಂಡ!

ಅಗತ್ಯ ಮಾನದಂಡವಿಲ್ಲ

ಸುರಕ್ಷತೆ ಕ್ರಮ ಕೈಗೊಳ್ಳಲಾಗುತ್ತಿಲ್ಲ

ರಕ್ಷಣಾ ಉಡುಪು ಇಲ್ಲ

ಅಗ್ನಿಶಾಮಕ ಸಿಬ್ಬಂದಿಯೂ ಕಡಿಮೆ

ಕ್ರಾಶ್ ಫೈರ್, ಟೆಂಡರ್ ಫೈರ್ ಇಂಜಿನ್ ನಿರ್ವಹಣೆಗೆ ಸಿಬ್ಬಂದಿಯೇ ಇಲ್ಲ…

ವಿಮಾನ ನಿಯಮ ಕಾಯ್ದೆ (Aviation Rules) ಉಲ್ಲಂಘಿಸಿದ್ದಕ್ಕೆ ವಿಮಾನಯಾನ ನಿರ್ದೇಶನಾಲಯವು (DGCA) ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Shivamogga Airport) ನೋಟಿಸ್ ಜಾರಿ ಮಾಡಿದ್ದು, 20 ಲಕ್ಷ ರೂ. ದಂಡ (Penalty) ವಿಧಿಸಿದೆ. ನೊಟೀಸ್ ತಲುಪಿದ 30 ದಿನಗಳ ಒಳಗೆ ದಂಡ ಪಾವತಿಸಬೇಕು ಎಂದು ಆಪರೇಷನ್ಸ್ ವಿಭಾಗದ ನಿರ್ದೇಶಕ ಚಂದ್ರ ಮಣಿ ಪಾಂಡೆ ಆದೇಶಿಸಿದ್ದಾರೆ.

 

ಕಳೆದ ಜುಲೈ 10 ರಿಂದ 12ರವರೆಗೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಡಿಜಿಸಿಎ ಅಧಿಕಾರಿಗಳು ತಪಾಸಣೆ ನಡೆಸಿದ್ದರು. ಈ ಸಂದರ್ಭ ನಿರ್ವಹಣೆ ಕೊರತೆ ಗಮನಕ್ಕೆ ಬಂದಿತ್ತು. ವಿಮಾನಯಾನಕ್ಕೆ ಅಗತ್ಯ ಮಾನದಂಡ ಮತ್ತು ಸುರಕ್ಷತೆ ಕ್ರಮ ಕೈಗೊಳ್ಳದ ಹಿನ್ನೆಲೆ ದಂಡ ವಿಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಅಗತ್ಯ ಸಂಖ್ಯೆಯ ಉಸಿರಾಟದ ಉಪಕರಣಗಳು, ರಕ್ಷಣಾ ಉಡುಪು ಇಲ್ಲ. ಅಗ್ನಿಶಾಮಕ ವಿಭಾಗದಲ್ಲಿ 18 ಸಿಬ್ಬಂದಿ ಇದ್ದಾರೆ ಎಂದು ತಿಳಿಸಲಾಗಿತ್ತು. ಆದರೆ ಹಾಜರಾತಿ ಪುಸ್ತಕದ ಪರಿಶೀಲನೆ ವೇಳೆ 13 ಮಂದಿ ಮಾತ್ರ ಕಾರ್ಯ ನಿರ್ವಹಿಸುತ್ತಿದ್ದರು. ಕ್ರಾಶ್ ಫೈರ್, ಟೆಂಡರ್ ಫೈರ್ ಇಂಜಿನ್ ನಿರ್ವಹಣೆಗೆ ಸಿಬ್ಬಂದಿ ಇಲ್ಲ. ಸಿಎಫ್‌ಟಿ ವಾಹನ ಟೆಸ್ಟ್ಗಳ ರೆಕಾರ್ಡ್ ಇರಲಿಲ್ಲ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.