ನೂತನ ಪೊಲೀಸ್ ಭವನ; ಅ.26ಕ್ಕೆ ಉದ್ಘಾಟಿಸಲಿದ್ದಾರೆ ಗೃಹಮಂತ್ರಿ ಡಾ.ಜಿ.ಪರಮೇಶ್ವರ್*
*ನೂತನ ಪೊಲೀಸ್ ಭವನ; ಅ.26ಕ್ಕೆ ಉದ್ಘಾಟಿಸಲಿದ್ದಾರೆ ಗೃಹಮಂತ್ರಿ ಡಾ.ಜಿ.ಪರಮೇಶ್ವರ್*
ಶಿವಮೊಗ್ಗ ಪೊಲೀಸ್ ಇಲಾಖೆಯ ನೂತನ ಪೊಲೀಸ್ ಭವನದ ಉದ್ಘಾಟನಾ ಸಮಾರಂಭವನ್ನು ಅ.26 ರಂದು ಬೆಳಿಗ್ಗೆ 11 ಕ್ಕೆ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ರಾಜ್ಯ ಸರ್ಕಾರದ ಗೃಹಮಂತ್ರಿಗಳಾದ ಡಾ. ಜಿ. ಪರಮೇಶ್ವರರವರು ಭವನದ ಉದ್ಘಾಟನೆ ನೆರವೇರಸಲಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉಪಸ್ಥಿತಿಯಲ್ಲಿ ಶಾಸಕರು ಹಾಗೂ ಕ.ರಾ.ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಕೆ. ಸಂಗಮೇಶ ಮತ್ತು ಶಾಸಕರು ಹಾಗೂ ಕ.ರಾ.ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಇವರುಗಳು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಶಾಸಕರಾದ ಎಸ್.ಎನ್ ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಜಿಲ್ಲೆಯ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಜನಪ್ರತಿನಿಧಿಗಳು, ಪಾಲಿಕೆ ಮಹಾಪೌರರು, ವಿವಿಧ ನಿಗಮ/ಮಂಡಳಿ/ಪ್ರಾಧಿಕಾರಗಳ ಅಧ್ಯಕ್ಷರು, ಕ.ರಾ.ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರಾದ ಅಲೋಕ್ ಮೋಹನ್ ಸೇರಿದಂತೆ ವಿವಿಧ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಪಾಲಿಕೆ ಆಯುಕ್ತರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.