ಸಾಗರದ ಕಾರ್ಗಲ್ ಬಳಿ ದೆವ್ವದ ಅಟ್ಯಾಕ್;ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ ಎಂದ ಪೊಲೀಸ್ಏನಿದು ದೆವ್ವದ ಕಥೆ?

ಸಾಗರದ ಕಾರ್ಗಲ್ ಬಳಿ ದೆವ್ವದ ಅಟ್ಯಾಕ್;

ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ ಎಂದ ಪೊಲೀಸ್

ಏನಿದು ದೆವ್ವದ ಕಥೆ?

ಕಳೆದ 27 ರಂದು ರಾತ್ರಿ ಸಾಗರ ತಾಲ್ಲೂಕಿನ ಕಾರ್ಗಲ್ ನ ಸಮೀಪ *ಕಂಚಿಕೈ ರಸ್ತೆಯಲ್ಲಿ ಎರಡು ಜನ ಬೈಕ್ ಸವಾರರಿಗೆ ದೆವ್ವ ಎದುರಾಗಿ* ಒಬ್ಬರಿಗೆ ತುಂಬಾ ಸೀರಿಯಸ್ ಆಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಮತ್ತು ಇನ್ನೊಬ್ಬರು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ *ಅಡ್ಮಿಟ್ ಆಗಿರುತ್ತಾರೆಂದು ಪೋಟೋ ಮತ್ತು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಕೆಲವರು.

*ಇದು ಸುಳ್ಳು ಸುದ್ದಿ*. ಸಾರ್ವಜನಿಕರು ಭಯ ಪಡುವ ಅವಶ್ಯಕತೆ ಇರುವುದಿಲ್ಲ. ಈ ರೀತಿಯ *ಯಾವುದೇ ಪ್ರಕರಣಗಳು ಬೆಳಕಿಗೆ* ಬಂದಿರುವುದಿಲ್ಲ.

ಸುಳ್ಳು ಸುದ್ಧಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವುದು, ಫಾರ್ವರ್ಡ್ ಮಾಡುವುದು, ಶೇರ್ ಮಾಡುವುದು ಕಾನೂನು ರೀತ್ಯಾ ಅಪರಾಧವಾಗಿದ್ದು, ಈ ರೀತಿ ಮಾಡುವುದು ಕಂಡುಬಂದಲ್ಲಿ, ಅಂತಹವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದೆ.