ಅಟೆಂಡರ್ ಕಮಲಮ್ಮ ಕದ್ದ ಚಿನ್ನ ಕಕ್ಕಿಸಿದ ಪೊಲೀಸರು!**20 ಲಕ್ಷದ ಚಿನ್ನ ಕದ್ದಿದ್ದ ಐಟಿ ಉದ್ಯೋಗಿ ಸಿಕ್ಕಿಬಿದ್ದಿದ್ದು ಹೇಗೆ?*
*ಅಟೆಂಡರ್ ಕಮಲಮ್ಮ ಕದ್ದ ಚಿನ್ನ ಕಕ್ಕಿಸಿದ ಪೊಲೀಸರು!*
*20 ಲಕ್ಷದ ಚಿನ್ನ ಕದ್ದಿದ್ದ ಐಟಿ ಉದ್ಯೋಗಿ ಸಿಕ್ಕಿಬಿದ್ದಿದ್ದು ಹೇಗೆ?*
ಭದ್ರಾವತಿ ನ್ಯೂಟೌನ್ ಪೊಲೀಸರು ಕಾರ್ಯಾಚರಣೆ ನಡೆಸಿ ಇತ್ತೀಚೆಗೆ ನ. 1 ರಂದು ಮಧ್ಯಾಹ್ನ ಕೆ.ಎಸ್.ಆರ್.ಟಿಸಿ ಬಸ್ ನಿಲ್ದಾಣದಲ್ಲಿ ಸುಮಾರು 20 ಲಕ್ಷ ರೂ. ಮೌಲ್ಯದ 276.75 ಗ್ರಾಂ ತೂಕದ ಚಿನ್ನಾಭರಣಗಳಿದ್ದ ಚೀಲ ಕಳ್ಳತನವಾಗಿದ್ದು, ಆರೋಪಿತಳನ್ನು ಬಂಧಿಸಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದ ಕಾಶಿಪುರ ನಿವಾಸಿಯಾದ ಪ್ರಭಾವತಿ(43) ತಮ್ಮ ಮನೆಗೆ ಬಂಗಾರದ ಆಭರಣಗಳಿದ್ದ ಕಿಟ್ ಬ್ಯಾಗ್ಪ ಹಾಗೂ ಇತರ ವಸ್ತುಗಳಿದ್ದ ಬ್ಯಾಗ್ ಗಳನ್ನು ತೆಗೆದುಕೊಂಡು ಭದ್ರಾವತಿಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಬಸ್ ನಲ್ಲಿ ಶಿವಮೊಗ್ಗಕ್ಕೆ ಬಂದಿದ್ದರು.
ಶಿವಮೊಗ್ಗದಲ್ಲಿ ಬಸ್ ಇಳಿಯುವಾಗ ಬಂಗಾರದ ಆಭರಣಗಳಿದ್ದ ಕಿಟ್ ಬ್ಯಾಗ್ ನಾಪತ್ತೆಯಾಗಿತ್ತು. ಸದರಿ ಬ್ಯಾಗ್ ನಲ್ಲಿ 20 ಲಕ್ಷ ರೂ. ಮೌಲ್ಯದ ಆಭರಣ ಹಾಗೂ ಎರಡು ರೇಷ್ಮೆ ಸೀರೆಗಳು ಕಳುವಾಗಿದ್ದು ಈ ಬಗ್ಗೆ ನ್ಯೂಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಸಂಬಂಧ ಭದ್ರಾವತಿ ಪೊಲೀಸ್ ವೃತ್ತ ನಿರೀಕ್ಷಕ ಶೈಲಕುಮಾರ್, ಪಿಎಸ್‌ಐ ಟಿ. ರಮೇಶ್, ಎಎಸ್‌ಐ ಮಂಜಪ್ಪ, ಸಿಬ್ಬಂದಿಗಳಾದ ನವೀನ್, ಹಾಲಪ್ಪ, ಮಧುಪ್ರಸಾದ್, ಮೌನೇಶ್, ಪ್ರಸನ್ನ, ದಿವ್ಯಶ್ರೀ ಒಳಗೊಂಡ ವಿಶೇಷ ತಂಡ ರಚಿಸಲಾಗಿತ್ತು. ನ. 3ರಂದು ಈ ತಂಡ ಪ್ರಕರಣದ ಆರೋಪಿತಳಾದ ಸೀಗೆಬಾಗಿ ನಿವಾಸಿ ಅಟೆಂಡರ್೯ ಕೆಲಸ ಮಾಡುವ ಕಮಲಮ್ಮ(48) ರನ್ನು ದಸ್ತಗಿರಿ ಮಾಡಿ ಕಳವು ಮಾಡಿದ್ದ ಆಭರಣ ಮತ್ತು ರೇಷ್ಮೆ ಸೀರೆ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.
ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ತನಿಖಾ ತಂಡಕ್ಕೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಅಭಿನಂದಿಸಲಾಗಿದೆ ಎಂದರು.
ಭದ್ರಾವತಿ ಹೊಸ ಮನೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಮನೆಗಳತನ ಪ್ರಕರಣದ ಆರೋಪಿಯನ್ನು ಬಂಧಿಸಿ, ಸುಮಾರು 16.50 ಲಕ್ಷ ರೂ. ಮೌಲ್ಯದ 259 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
*20 ಲಕ್ಷದ ಚಿನ್ನ ಕದ್ದಿದ್ದ ಐಟಿ ಉದ್ಯೋಗಿ ಸಿಕ್ಕಿಬಿದ್ದಿದ್ದು ಹೇಗೆ?*
ಹೊಸ ಮನೆ ಭದ್ರಾವತಿ ನಿವಾಸಿ, ಜಿ ಆರ್ ವಿನೋದ್ ಅವರು ಆಗಸ್ಟ್ 15ರಂದು ಊರಿಗೆ ಹೋಗಿದ್ದು, ಆಗಸ್ಟ್ 21ರಂದು ಮನೆಗೆ ಮರಳಿ ಬಂದು ನೋಡಿದಾಗ ಬೀರುವಿನಲ್ಲಿಟ್ಟಿದ್ದ 20 ಲಕ್ಷ ರೂಪಾಯಿ ಮೌಲ್ಯದ 400 ಗ್ರಾಂ ಚಿನ್ನಾಭರಣಗಳು ಕಳುವಾಗಿರುವುದು ಗೊತ್ತಾಗಿತ್ತು. ಅವರು ಭದ್ರಾವತಿಯ ಹೊಸ ಮನೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಿಗಳ ಪತ್ತೆಗಾಗಿ ಭದ್ರಾವತಿ ಡಿವೈಎಸ್ಪಿ,ನಾಗರಾಜ್, ಸಿಪಿಐ ಶ್ರೀಶೈಲ ಕುಮಾರ, ಪಿಎಸೈ ಕೃಷ್ಣಕುಮಾರ್ ಬಿ ಮಾನೆ, ಮತ್ತು ಸಿಬ್ಬಂದಿಗಳಾದ ಮಧುಕುಮಾರ್, ಆದರ್ಶ ಶೆಟ್ಟಿ, ತೇಜಕುಮಾರ್, ಅವರನ್ನು ಒಳಗೊಂಡ ವಿಶೇಷ ತಂಡ ರಚಿಸಲಾಗಿದ್ದು, ಈ ತನಿಖಾ ತಂಡ, ನವೆಂಬರ್ ಮೂರರಂದು ಈ ಪ್ರಕರಣದ ಆರೋಪಿಯಾದ, ಎಸ್ ಎಸ್ ನಿತಿನ್ 27, ಐಟಿ ಉದ್ಯೋಗಿ ನಿವಾಸಿ ಅವರನ್ನು ಬಂಧಿಸಿ, ಆರೋಪಿತನಿಂದ 16 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ. ಬಂದಿತ ಆರೋಪಿ ಚಿನ್ನಾಭರಣಗಳನ್ನು ಕರಗಿಸಿ, ಚಿನ್ನದ ಗಟ್ಟಿಗಳನ್ನಾಗಿ ಮಾಡಿಕೊಂಡಿದ್ದ ಒಟ್ಟು, 259 ಗ್ರಾಂ ತೂಕದ ಆರು ಬಂಗಾರದ ಗಟ್ಟಿಗಳು ಮತ್ತು ಬಂಗಾರದ ಕೈ ಕಡಗವನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಸದರಿ ತನಿಖಾ ತಂಡಕ್ಕೆ ಜಿಲ್ಲಾ ಪೊಲೀಸ್ ವತಿಯಿಂದ ಪ್ರಶಂಶಿಸಿ ಅಭಿನಂದಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ತಿಳಿಸಿದರು. ಅಲ್ಲದೆ ಬ್ಯಾಂಕ್,ಎಟಿಎಂ ಗಳ ಭದ್ರತೆಗೆ ಸಂಬಂಧಿಸಿದಂತೆ, ಬ್ಯಾಂಕ್ ಅಧಿಕಾರಿಗಳ ವಿಶೇಷ ಸಭೆ ಕರೆಯಲಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ, ಹೆಚ್ಚುವರಿ ಪೋಲಿಸ್ ಅಧೀಕ್ಷಕ ಅನಿಲ್ ಕುಮಾರ್, ಎ.ಜಿ. ಕಾರ್ಯಪ್ಪ ಉಪಸ್ಥಿತರಿದ್ದರು.