ಕವಿಸಾಲು
01
ಜಿಲ್ಲೆಯಾದ್ಯಂತ ಶಾಲೆ, ಕಾಲೇಜು ಮತ್ತು ಅಂಗನವಾಡಿಗಳಿಗೆ ರಜೆ ಘೋಷಣೆ*
*ಜಿಲ್ಲೆಯಾದ್ಯಂತ ಶಾಲೆ, ಕಾಲೇಜು ಮತ್ತು ಅಂಗನವಾಡಿಗಳಿಗೆ ರಜೆ ಘೋಷಣೆ*
ಶಿವಮೊಗ್ಗ ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಹಿನ್ನಲೆಯಲ್ಲಿ ಅಧಿಕ ಮಳೆ ಆಗುವ ಸಂಭವ ಇರುವ ಕಾರಣ ಪದವಿ, ಪದವಿ ಪೂರ್ವ ಕಾಲೇಜುಗಳು, 1ರಿಂದ10 ನೇ ತರಗತಿ, ಅಂಗನವಾಡಿ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಪ್ರಭಾರಿ ಆಗಿರುವ ಜಿಲ್ಲಾ ಪಂಚಾಯತ್ ಸಿಇಒ ಹೇಂಮತ್ ಕುಮಾರ್ ಅಧಿಕ ಮಳೆ ಹಿನ್ನಲೆಯಲ್ಲಿ ರಜೆ ಘೋಷಿಸಿದ್ದಾರೆ. ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ಮಕ್ಕಳಿಗೆ ತೊಂದರೆಯಾಗದಂತೆ ಡಿ.3 ರಂದು ಇಂದು ಮಾತ್ರ ರಜೆ ಘೋಷಿಸಿದೆ. ಇಂದು ನೀಡಿದ ರಜೆಯನ್ನ ಮುಂದೆ ಬರುವ ಸಾರ್ವತ್ರಿಕ ರಜೆಗಳಲ್ಲಿ ಸರಿ ದೂಗಿಸಿಕೊಳ್ಳಲು ಸೂಚಿಸಲಾಗಿದೆ. ವಿಪತ್ತು ನಿರ್ವಹಣ ತುರ್ತು ಅಧಿಕೃತ ವಿಜ್ಞಾಪನೆಯಲ್ಲಿ ಡಿಸಿಯವರು ಸೂಚಿಸಿದ್ದಾರೆ.