ಕವಿಸಾಲು
01
ಡಿಸೆಂಬರ್ 28 ಮತ್ತು 29 ರಂದು ಬೆಂಗಳೂರಿನ ಬಾಗಲೂರು ವಿಜೆ ಇಂಟರ್‌ನ್ಯಾಷನಲ್ ಶಾಲಾ ಮೈದಾನದಲ್ಲಿ ರಾಜ್ಯ ಮಟ್ಟದ 4ನೇ ವೈಜ್ಞಾನಿಕ ಸಮ್ಮೇಳನ ******* ಸಮ್ಮೇಳನದ ಸರ್ವಾಧ್ಯಕ್ಷರಾಗಿ ರಂಗಭೂಮಿ ಕಲಾವಿದೆ ಚಲನಚಿತ್ರ ನಟಿ ಉಮಾಶ್ರೀ ******** ವಿಜ್ಞಾನ ವಸ್ತು ಪ್ರದರ್ಶನ, ವೈವಿಧ್ಯಮಯವಾದ ಆಹಾರ,ಕರಕುಶಲ ಮೇಳ, ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು
ಡಿಸೆಂಬರ್ 28 ಮತ್ತು 29 ರಂದು
ಬೆಂಗಳೂರಿನ ಬಾಗಲೂರು ವಿಜೆ ಇಂಟರ್‌ನ್ಯಾಷನಲ್ ಶಾಲಾ ಮೈದಾನದಲ್ಲಿ
ರಾಜ್ಯ ಮಟ್ಟದ 4ನೇ ವೈಜ್ಞಾನಿಕ ಸಮ್ಮೇಳನ
*******
ಸಮ್ಮೇಳನದ ಸರ್ವಾಧ್ಯಕ್ಷರಾಗಿ ರಂಗಭೂಮಿ ಕಲಾವಿದೆ ಚಲನಚಿತ್ರ ನಟಿ ಉಮಾಶ್ರೀ
********
ವಿಜ್ಞಾನ ವಸ್ತು ಪ್ರದರ್ಶನ, ವೈವಿಧ್ಯಮಯವಾದ ಆಹಾರ,ಕರಕುಶಲ ಮೇಳ, ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು
********
ಶಿವಮೊಗ್ಗ-ಡಿ:10/ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ದೊಡ್ಡಬಳ್ಳಾಪುರ-ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲೆ, ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜುಗಳ ಒಕ್ಕೂಟ, ಕರ್ನಾಟಕ ರಾಜ್ಯ ಮಾನವ ಬಂಧುತ್ವ ವೇದಿಕೆ ಹಾಗೂ ಕರ್ನಾಟಕ ಸರ್ಕಾರದ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಇವುಗಳ ಸಹಯೋಗದೊಂದಿಗೆ ಇದೇ ಡಿಸೆಂಬರ್ 28 ಮತ್ತು 29ರಂದು ಎರಡು ದಿನಗಳ ಕಾಲ ಬಾಗಲೂರಿನ ವಿಜೆ ಇಂಟರ್ ನ್ಯಾಷನಲ್ ಶಾಲಾ ಮೈದಾನದಲ್ಲಿ ರಾಜ್ಯ ಮಟ್ಟದ 4ನೇ ವೈಜ್ಞಾನಿಕ ಸಮ್ಮೇಳನವನ್ನು ರಂಗಭೂಮಿ ಕಲಾವಿದೆ, ಖ್ಯಾತ ಚಲನಚಿತ್ರನಟಿ ಹಾಗೂ ಸಾಮಾಜಿಕ ಕಳಕಳಿಯ ಉಮಾಶ್ರೀಯವರ ಸರ್ವಾಧ್ಯಕ್ಷತೆಯಲ್ಲಿ ಆಯೋಜಿಸಲಾಗಿದೆ ಎಂದು ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷರಾದ ಡಾ.ಹುಲಿಕಲ್ ನಟರಾಜ್ ಹೇಳಿದರು.
ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪರಿಷತ್ತು ಆರಂಭವಾಗಿ ಯಶಸ್ವಿಯಾಗಿ ನಾಲ್ಕು ವರ್ಷಗಳನ್ನು ಕಳೆದಿದ್ದು ಜಸ್ಟೀಸ್ ನಾಗಮೋಹನ್ ದಾಸ್, ಇಸ್ರೋದ ಮಾಜಿ ಅಧ್ಯಕ್ಷರು ಹಾಗೂ ಖ್ಯಾತ ವಿಜ್ಞಾನಿ ಡಾ.ಎ.ಎಸ್.ಕಿರಣ್ ಕುಮಾರ್ ಹಾಗೂ ಅನೇಕ ಗಣ್ಯ ಚಿಂತಕರ ಮಾರ್ಗದರ್ಶನದಲ್ಲಿ ರಾಜ್ಯ ಮಟ್ಟದಲ್ಲಿ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತಾ ಬರಲಾಗಿದೆ. ಪರಿಷತ್ತು ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ತನ್ನ ಶಾಖೆಗಳನ್ನು ಆರಂಭಿಸಿದ್ದು ಜನಪರವಾದ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಸದಸ್ಯರನ್ನು ಹೊಂದಿದ ಹೆಗ್ಗಳಿಕೆ ಪರಿಷತ್ತಿಗಿದೆ.
ಪ್ರತಿ ವರ್ಷ ರಾಜ್ಯಮಟ್ಟದ ವೈಜ್ಞಾನಿಕ ಸಮ್ಮೇಳನ, ಕಾಯಕರತ್ನ ಪ್ರಶಸ್ತಿ, ಹೆಚ್.ಎನ್.ಪ್ರಶಸ್ತಿ, ಜೀವಮಾನ ಶ್ರೇಷ್ಠ ಸಾಧನಾ ಪ್ರಶಸ್ತಿ ಪ್ರದಾನ, ನಾಯಕತ್ವ ಶಿಬಿರ, ಸ್ಮರಣ ಸಂಚಿಕೆ, ವಿಜ್ಞಾನ ಸಿರಿ ಮಾಸ ಪತ್ರಿಕೆ ಹೀಗೆ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತ ಬಂದಿದೆ.
ರಾಜ್ಯ ಮಟ್ಟದ ಪ್ರಥಮ ವೈಜ್ಞಾನಿಕ ಸಮ್ಮೇಳನವನ್ನು ಇಸ್ರೋದ ಮಾಜಿ ಅಧ್ಯಕ್ಷರು ಹಾಗೂ ಖ್ಯಾತ ವಿಜ್ಞಾನಿ ಡಾ.ಎ.ಎಸ್.ಕಿರಣ್‌ಕುಮಾರ್ ಅವರು ಸರ್ವಾಧ್ಯಕ್ಷತೆಯಲ್ಲಿ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿತ್ತು ಈ ಸಮ್ಮೇಳನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದು ಇತಿಹಾಸ. ಎರಡನೇ ಸಮ್ಮೇಳನವನ್ನು ಜಸ್ಟೀಸ್ ನಾಗಮೋಹನ್ ದಾಸ್ ಅವರ ಸರ್ವಾಧ್ಯಕ್ಷತೆಯಲ್ಲಿ ತುಮಕೂರಿನಲ್ಲಿ ನಡೆಸಲಾಗಿತ್ತು, ಮೂರನೇ ಸಮ್ಮೇಳನವನ್ನು ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ಸತೀಸ್ ಜಾರಕೀಹೊಳಿಯವರ ಸರ್ವಾಧ್ಯಕ್ಷತೆಯಲ್ಲಿ ನಡೆದ ಸಮ್ಮೇಳನಕ್ಕೆ ಲಕ್ಷಕ್ಕಿಂತ ಹೆಚ್ಚು ಜನ ಭಾಗವಹಿಸಿದ್ದು ಇತಿಹಾಸವನ್ನು ಸೃಷ್ಟಿಸಿತ್ತು.
ರಾಜ್ಯ ಮಟ್ಟದ 4ನೇ ವೈಜ್ಞಾನಿಕ ಸಮ್ಮೇಳನವನ್ನು ಐತಿಹಾಸಿಕವಾಗಿ ನಡೆಸಲು ಸಕಲ ಸಿದ್ದತೆಗಳನ್ನು ನಡೆಸಲಾಗಿದೆ. ನಾಡಿನ ಹೆಸರಾಂತ ರಂಗಭೂಮಿ ಕಲಾವಿದೆ, ಚಲನಚಿತ್ರ ನಟಿ, ಸಾಮಾಜಿಕ ಕಳಕಳಿಯುಳ್ಳ ಸಾಂಸ್ಕೃತಿಕ ರಾಯಭಾರಿ ವ್ಯಕ್ತಿತ್ವದ ಉಮಾಶ್ರೀಯವರನ್ನು ಸಮ್ಮೇಳನದ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ಸಮ್ಮೇಳನದಲ್ಲಿ ಅನೇಕ ಚಿಂತನ ಗೋಷ್ಠಿಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ನಾಟಕ ಪ್ರದರ್ಶನ,ಹಾಸ್ಯಸಂಜೆ ಮೊದಲಾದ ಕಾರ್ಯಕ್ರಮಗಳು ನಡೆಯಲಿದ್ದು ಇದೆ ಸಂದರ್ಭದಲ್ಲಿ ವಿಜ್ಞಾನ ವಸ್ತು ಪ್ರದರ್ಶನ, ಆಹಾರ ಮೇಳ, ಕರಕುಶಲ ಮೇಳ, ವಿದ್ಯಾರ್ಥಿಗಳಿಂದ ವಿಜ್ಞಾನ ಮಾದರಿಗಳ ಪ್ರದರ್ಶನ ಆಯೋಜಿಸಿದೆ. ಸಮ್ಮೇಳನಕ್ಕೆ ಭಾಗವಹಿಸುವವರಿಗೆ ವಸತಿ, ಊಟ ಉಪಹಾರದ ವ್ಯವಸ್ಥೆ ಮಾಡಲಾಗುವುದು. ವಿವಿಧ ಕ್ಷೇತ್ರಗಳ ಸಾಧಕರಿಗೆ ರಾಜ್ಯಮಟ್ಟದಲ್ಲಿ ಜೀವಮಾನಶ್ರೇಷ್ಠ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ರಾಜ್ಯದ ಪ್ರತಿ ಜಿಲ್ಲೆಗೆ ಒಬ್ಬರಂತೆ 37 ಜನರಿಗೆ ರಾಜ್ಯ ಮಟ್ಟದಲ್ಲಿ ಹೆಚ್.ಎನ್.ಪ್ರಶಸ್ತಿಯನ್ನು ನೀಡಲಾಗುವುದು. ಈ ಭಾರಿ ವಿಶೇಷವಾಗಿ ಮಹಿಳಾ ಸಾಧಕಿಯರನ್ನು ಗುರುತಿಸಿ ರಾಜ್ಯಮಟ್ಟದಲ್ಲಿ ಚೈತನ್ಯಸ್ತ್ರೀ ಪ್ರಶಸ್ತಿಯನ್ನು ನೀಡಿ ಅಭಿನಂದಿಸಲಾಗುವುದು.
ಸಮ್ಮೇಳನವನ್ನು ಕರ್ನಾಟಕ ಸರ್ಕಾರದ ಜನಪ್ರಿಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು ಉದ್ಘಾಟಿಸಲು ಆಹ್ವಾನಿಸಲಾಗಿದೆ. ಉಪಮುಖ್ಯಮಂತ್ರಿಗಳು, ಕೇಂದ್ರ ಹಾಗೂ ರಾಜ್ಯದ ಅನೇಕ ಮಂತ್ರಿಗಳು, ಸಂಸದರು, ಶಾಸಕರು, ವಿಧಾನಪರಿಷತ್ತು ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು, ವಿಜ್ಞಾನಿಗಳು, ಸಾಮಾಜಿಕ ಚಿಂತಕರು, ವಿದ್ಯಾರ್ಥಿಗಳು, ಉಪನ್ಯಾಸಕರು, ಶಿಕ್ಷಕರು, ಸಾರ್ವಜನಿಕರು ಭಾಗವಹಿಸಲಿದ್ದಾರೆ.
ಶಿವಮೊಗ್ಗ ಜಿಲ್ಲೆಯಿಂದ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಜಾನಪದ, ಸಾಮಾಜಿಕ, ಪತ್ರಿಕೋಧ್ಯಮದಲ್ಲಿ ಕಳೆದ 4ದಶಕಗಳಿಂದ ತೊಡಗಿಸಿಕೊಂಡು ಬಂದಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಿ.ಮಂಜುನಾಥ ಅವರಿಗೆ ರಾಜ್ಯ ಮಟ್ಟದ ಹೆಚ್.ಎನ್.ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು.
ಮಹಿಳಾ ಸಾಧಕಿಯರಾದ ಹೊಸನಗರದ ಸೀಮಾ ಸೇರಾವೋ ಅವರಿಗೆ ಚೈತನ್ಯಸ್ತ್ರೀ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಗುವುದು
ವೈಜ್ಞಾನಿಕ, ವೈಚಾರಿಕ ಚಿಂತಕರ ನೆಲೆಯಾಗಿರುವ ಶಿವಮೊಗ್ಗ ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದೆ.
ಸುದ್ದಿಗೋಷ್ಠಿಯಲ್ಲಿ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಬಿ.ಡಿ.ರವಿಕುಮಾರ್ , ಜಿಲ್ಲಾ ಪ್ರಧಾನ ಸೂರ್ಯ ಪ್ರಕಾಶ್, ಪ್ರಮುಖರಾದ ಮೂರ್ತಿ, ಸೀಮಾ ಸೇರಾವ್, ಜ್ಯೋತಿ ಮಣೂರು, ನಾರಾಯಣ ಎ.ಎಸ್, ಜಯಪ್ಪ, ದೇವೇಂದ್ರಪ್ಪ , ಶಿವಮೂರ್ತಿ,ಚಂದ್ರನಾಯಕ್, ನಿರಂಜನ, ವೀರಪಾಕ್ಷಪ್ಪ,ಹಾಗೂ ವಿವಿಧ ತಾಲ್ಲೂಕುಗಳ ಅಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.