ಹೊಸ ವರ್ಷ ಸಂಭ್ರಮ; ಹೋಂ ಸ್ಟೇ, ಹೋಟೆಲ್, ಲಾಡ್ಜ್, ಮತ್ತು ರೆಸಾರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆ

ಹೊಸ ವರ್ಷ ಸಂಭ್ರಮ; ಹೋಂ ಸ್ಟೇ, ಹೋಟೆಲ್, ಲಾಡ್ಜ್, ಮತ್ತು ರೆಸಾರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆ

ಹೊಸ ವರ್ಷ ಸಂಭ್ರಮಾಚರಣೆ – 2025ರ ಹಿನ್ನೆಲೆಯಲ್ಲಿ ಇಂದು   ಸಂಜೆ ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ, ಎಸ್ ಪಿ  ಮಿಥುನ್ ಕುಮಾರ್ ಜಿ.ಕೆ, ರವರ ನೇತೃತ್ವದಲ್ಲಿ, ಶಿವಮೊಗ್ಗ ಜಿಲ್ಲೆಯ ಎಲ್ಲಾ *ಹೋಂ ಸ್ಟೇ, ಹೋಟೆಲ್, ಲಾಡ್ಜ್, ಮತ್ತು ರೆಸಾರ್ಟ್ ಗಳ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯನ್ನು* ನಡೆಸಿ, ಈ ಕೆಳಕಂಡ ಸಲಹೆ ಸೂಚನೆಗಳನ್ನು ನೀಡಿದರು.

1) ಹೊಸ ವರ್ಷ ಆಚರಣೆಯ ಹಿನ್ನೆಲೆಯಲ್ಲಿ ಯಾವುದೇ *ಕಾರ್ಯಕ್ರಮ ಆಯೋಜಿಸುವ ಪೂರ್ವದಲ್ಲಿ,* ಸರಹದ್ದಿನ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಕಡ್ಡಾಯವಾಗಿ *ಅನುಮತಿ ಪಡೆದುಕೊಳ್ಳುವುದು.* ಪೊಲೀಸ್ ಇಲಾಖೆಯ ಗಮನಕ್ಕೆ ಬಾರದೆ / ಅನುಮತಿ ಪಡೆಯದೇ ಯಾವುದೇ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.

2) ಕಾರ್ಯಕ್ರಮ ಆಯೋಜಿಸುವವರು *ಸ್ಥಳಾವಕಾಶವನ್ನು ಗಮನದಲ್ಲಿಟ್ಟುಕೊಂಡು, ಅಷ್ಟೇ ಜನರಿಗೆ ಅನುಮತಿ ನೀಡುವುದು* ಹಾಗೂ ಆಯೋಜಿಸಲಾಗುವ ಕಾರ್ಯಕ್ರಮಕ್ಕೆ *ಎಷ್ಟು ಜನ ಸೇರುತ್ತಾರೆ ಮತ್ತು ಸಂಖ್ಯೆಗೆ ಅನುಗುಣವಾಗಿ ಕೈಗೊಳ್ಳಲಾದ ಮುಂಜಾಗ್ರತಾ ಕ್ರಮಗಳ* ಬಗ್ಗೆ ಮಾಹಿತಿ ನೀಡುವುದು.

3) ಕಾರ್ಯಕ್ರಮದ ಆಯೋಜಕರು *ಸಂಭ್ರಮಾಚರಣೆಯಲ್ಲಿ ಮಧ್ಯಪಾನಕ್ಕೆ ಅವಕಾಶ* ಇದ್ದಲ್ಲಿ, *ಅಬಕಾರಿ ಇಲಾಖೆಯ ಷರತ್ತುಗಳು ಹಾಗೂ ಮಾರ್ಗ ಸೂಚಿಯನ್ನು* ಕಡ್ಡಾಯವಾಗಿ ಪಾಲನೆ ಮಾಡುವುದು ಹಾಗೂ ಮಧ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಸ್ಥಿತಿಯಲ್ಲಿ ಇಲ್ಲದಿದ್ದಲ್ಲಿ ಬೇರೆ *ಚಾಲಕರ ಏರ್ಪಾಡು ಮಾಡಿ ಕಳುಹಿಸಿಕೊಡುವುದು* ಅಥವಾ ಅಲ್ಲಿಯೇ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡುವುದು.

4) ಹೊಸ ವರ್ಷದ ಆಚರಣೆಯನ್ನು *ಮಧ್ಯ ರಾತ್ರಿ 12:00 ಗಂಟೆಗೆ ಆಚರಿಸಿದ ನಂತರ ರಾತ್ರಿ 01:00 ಗಂಟೆಯ* ಒಳಗಾಗಿ ಎಲ್ಲಾ ರೀತಿಯ ಹೊರಾಂಗಣ ಕಾರ್ಯಕ್ರಮಗಳನ್ನು ಮುಕ್ತಾಯ ಮಾಡುವುದು.

5) ಕಾರ್ಯಕ್ರಮಕ್ಕೆ ಬರುವ ವಾಹನಗಳಿಗೆ *ಸೂಕ್ತ ಮತ್ತು ಸಮರ್ಪಕವಾಗಿ ಪಾರ್ಕಿಂಗ್ ವ್ಯವಸ್ಥೆ ಮಾಡುವುದು* ಹಾಗೂ 200 ಕ್ಕಿಂತ ಹೆಚ್ಚಿನ ಸಾರ್ವಜನಿಕರು ಸೇರುವ ಸ್ಥಳದಲ್ಲಿ, ಕಡ್ಡಾಯವಾಗಿ ಸಿಸಿ ಟಿವಿ ಗಳನ್ನು ಅಳವಡಿಸುವುದು ಮತ್ತು ಕಾರ್ಯಕ್ರಮಕ್ಕೆ ಬರುವ *ಸಾರ್ವಜನಿಕರ / ಅತಿಥಿಗಳ ಹೆಸರು ಮತ್ತು ವಿವರವನ್ನು ಬರೆದುಕೊಂಡು, ಯಾವುದಾದರೂ ಒಂದು ಗುರುತಿನ ಚೀಟಿಯನ್ನು* ಪಡೆದುಕೊಳ್ಳತಕ್ಕದ್ದು.

6) ಕಾರ್ಯಕ್ರಮದ ಆಯೋಜಕರುಗಳು ಕಾರ್ಯಕ್ರಮದ ಆಯೋಜಿಸಿದ *ಸ್ಥಳದಲ್ಲಿ ಒಳ ಬರುವ ಮತ್ತು ಹೊರ ಹೋಗುವ ದ್ವಾರದಲ್ಲಿ ತಮ್ಮ ಸಿಬ್ಬಂಧಿಗಳನ್ನು ನೇಮಿಸಿಕೊಂಡು,* ಸಾರ್ವಜನಿಕರ ಸುರಕ್ಷತೆಯ ಬಗ್ಗೆ ನಿಗಾವಹಿಸುವುದು.

7) ಕಾರ್ಯಕ್ರಮದಲ್ಲಿ *ಭಾಗವಹಿಸುವ ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆಗೆ ಆಧ್ಯತೆ ನೀಡಿ,* ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು, ಎಚ್ಚರದಿಂದಿರುವುದು. *ಯಾವುದೇ ಸಣ್ಣ ಪುಟ್ಟ ಘಟನೆಗಳು ಜರುಗಿದಾಗ,* ಯಾವುದೇ ನಿರ್ಲಕ್ಷತನ ತೋರದೇ ಕೂಡಲೇ 112 ತುರ್ತು ಸಹಾಯವಾಣಿಗೆ ಕರೆ ಮಾಡುವುದು.

8) *ಕಾರ್ಯಕ್ರಮದಲ್ಲಿ ಅಳವಡಿಸುವ ದ್ವನಿ ವರ್ದಕ,* ಪಟಾಕಿ ಸಿಡಿಸುವುದರಿಂದ ಸಾರ್ವಜನಿಕರಿಗೆ ಕಿರಿಕಿರಿ / ತೊಂದರೆಯಾಗದ ರೀತಿ ನೋಡಿಕೊಳ್ಳುವುದು ಹಾಗೂ ಕಾರ್ಯಕ್ರಮ ಆಯೋಜನೆಯ ಸ್ಥಳದಲ್ಲಿ *ಈಜುಕೊಳ ( ಸ್ವಿಮ್ಮಿಂಗ್ ಫೂಲ್ ) ಇದ್ದಲ್ಲಿ,* ಹೆಚ್ಚಿನ ಗಮನ ಹರಿಸುವುದು ಹಾಗೂ ಈಜುಕೊಳಕ್ಕೆ ಸಾರ್ವಜನಿಕರಿಗೆ ಅವಕಾಶವಿದ್ದಲ್ಲಿ ನುರಿತ ಈಜು ತಜ್ಞರನ್ನು ನೇಮಕ ಮಾಡಿಕೊಂಡು, *ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು.*

ಸದರಿ ಸಭೆಯಲ್ಲಿ * ಅನಿಲ್ ಕುಮಾರ್ ಭೂಮರಡ್ಡಿ,* ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, * ಎ.ಜಿ ಕಾರ್ಯಪ್ಪ* ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, * ಬಾಬು ಆಂಜನಪ್ಪ,* ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ –ಎ ಉಪ ವಿಭಾಗ, * ಸುರೇಶ್,* ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ –ಬಿ ಉಪ ವಿಭಾಗ, * ನಾಗರಾಜ್,* ಪೊಲೀಸ್ ಉಪಾಧೀಕ್ಷಕರು, ಭದ್ರಾವತಿ ಉಪ ವಿಭಾಗ, * ಕೇಶವ್,* ಪೊಲೀಸ್ ಉಪಾಧೀಕ್ಷಕರು, ಶಿಕಾರಿಪುರ ಉಪ ವಿಭಾಗ, * ಗಜಾನನ ವಾಮನ ಸುತರ* ಪೊಲೀಸ್ ಉಪಾಧೀಕ್ಷಕರು, ತೀರ್ಥಹಳ್ಳಿ ಉಪ ವಿಭಾಗ ಹಾಗೂ ಪೊಲೀಸ್ ವೃತ್ತ ನಿರೀಕ್ಷಕರು, ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು ಹಾಗೂ *ಹೋಂ ಸ್ಟೇ, ಹೋಟೆಲ್, ಲಾಡ್ಜ್, ಮತ್ತು ರೆಸಾರ್ಟ್ ಗಳ ಮಾಲೀಕರು ಹಾಗೂ ವ್ಯವಸ್ಥಾಪಕರು* ಉಪಸ್ಥಿತರಿದ್ದರು.