ಕೃಷಿ ವಿದ್ಯಾರ್ಥಿಗಳಿಂದ ಸಮಗ್ರ ಪೋಷಕಾಂಶ ನಿವಹ೯ಣೆ ಕುರಿತು ಗುಂಪು ಚರ್ಚೆ
ಕೃಷಿ ವಿದ್ಯಾರ್ಥಿಗಳಿಂದ ಸಮಗ್ರ ಪೋಷಕಾಂಶ ನಿವಹ೯ಣೆ ಕುರಿತು ಗುಂಪು ಚರ್ಚೆ
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗದ ಬಿ. ಎಸ್ಸಿ. ಕೃಷಿ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾಯಾ೯ನುಭವ ಕಾಯ೯ಕ್ರಮದ ಅಡಿಯಲ್ಲಿ ಶಿಕಾರಿಪುರ ತಾಲೂಕಿನ ನೆಲವಾಗಿಲು ಗ್ರಾಮದಲ್ಲಿ ‘ಸಮಗ್ರ ಪೋಷಕಾಂಶ ನಿವಹ೯ಣೆ’ ಕುರಿತು ಗುಂಪು ಚರ್ಚೆಯನ್ನು ಆಯೋಜಿಸಿದ್ದರು.
ಈ ಕಾಯ೯ಕ್ರಮದಲ್ಲಿ ವಿದ್ಯಾರ್ಥಿಗಳು ಮೊದಲಿಗೆ ಬೆಳೆಗಳಲ್ಲಿ ಸಾರಜನಕ, ರಂಜಕ, ಪೊಟಾಷಿಯಂ ಮತ್ತು ಸೂಕ್ಷ್ಮ ಪೋಷಕಾಂಶಗಳ ಮಹತ್ವವನ್ನು ವಿವರಿಸಿದರು. ಮಣ್ಣು ಪರೀಕ್ಷೆಯ ಆಧಾರದ ಮೇಲೆ ಎಲ್ಲಾ ಪೋಷಕಾಂಶಗಳು ನಿರ್ದಿಷ್ಟ ಪ್ರಮಾಣದಲ್ಲಿ ಬೆಳೆಗಳಿಗೆ ಸಿಗುವಂತೆ ನೋಡಿಕೊಳ್ಳಬೇಕು. ಸಮಗ್ರ ಪೋಷಕಾಂಶ ನಿವಹ೯ಣೆಯಿಂದ ಮಣ್ಣಿನ ಫಲವತ್ತತೆ ಹೆಚ್ಚಿಸಿ ಬೆಳೆ ಇಳುವರಿ ಹೆಚ್ಚಿಸಲು ಸಾಧ್ಯ. ರಾಸಾಯನಿಕ ಗೊಬ್ಬರಗಳ ಬಳಕೆ ಕಡಿಮೆ ಮಾಡಿ ಸಾವಯವ ಮತ್ತು ಜೈವಿಕ ಗೊಬ್ಬರಗಳ ಬಳಕೆ ಹೆಚ್ಚಿಸಬೇಕೆಂದು ತಿಳಿಸಿದರು. ಗೊಬ್ಬರವನ್ನು ಹಾಕುವ ಸರಿಯಾದ ಸಮಯ ಮತ್ತು ವಿಧಾನವನ್ನು ತಿಳಿಸಿಕೊಟ್ಟರು. ಸೂಕ್ಷ್ಮ ಪೋಷಕಾಂಶಗಳು ಮತ್ತು ಜೈವಿಕ ಗೊಬ್ಬರಗಳ ಪ್ಯಾಕ್ ಗಳನ್ನು ತಂದು ತೋರಿಸಿದರು. ನೆರೆದ ಜನರು ವಿಷಯದ ಬಗ್ಗೆ ಚಚಿ೯ಸಿ, ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ, ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದರು.
ಈ ಕಾರ್ಯಕ್ರಮದಲ್ಲಿ ಊರಿನ ಜನರು ಸಕ್ರಿಯವಾಗಿ ಪಾಲ್ಗೊಂಡು ಕಾಯ೯ಕ್ರಮವನ್ನು ಯಶಸ್ವಿಗೊಳಿಸಿದರು.