Add
01
ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ;ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ ಪೂರ್ಣಿಮಾ ಸುನೀಲ್
ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ;
ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ ಪೂರ್ಣಿಮಾ ಸುನೀಲ್ *
ಶಿವಮೊಗ್ಗ : ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ಆಡಳಿತ ಮಂಡಳಿಗೆ ಜನವರಿ 12 ರಂದು ಚುನಾವಣೆ ನಡೆಯಲಿದ್ದು, ಚುನಾವಣೆಗೆ ಮಹಿಳಾ ಮೀಸಲು ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ನಾನು ವೈಯಕ್ತಿಕ ಕಾರಣದಿಂದ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ ಎಂದು ಅಭ್ಯರ್ಥಿಯಾಗಿದ್ದ ಪೂರ್ಣಿಮಾ ಸುನೀಲ್ ತಿಳಿಸಿದ್ದಾರೆ.
ನಾಮಪತ್ರ ಹಿಂತೆಗೆದುಕೊಳ್ಳಲು ಅವಧಿ ಮೀರಿರುವುದರಿಂದ ಚುನಾವಣಾ ಕಣದಿಂದ ನಿವೃತ್ತಿ ಘೋಷಿಸುತ್ತಿದ್ದೇನೆ. ನಾನು ಚುನಾವಣಾ ಕಣದಿಂದ ಹಿಂದೆ ಸರಿದು ನಿವೃತ್ತರಾಗಿರುವುದನ್ನ ಮತದಾರರಿಗೆ ಈ ಮೂಲಕ ತಿಳಿಸುತ್ತಿದ್ದೇನೆ ಎಂದು ಪೂರ್ಣಿಮಾ ಸುನೀಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


