ಜ.25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ*ಶಿವಮೊಗ್ಗ ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಭ್ರಷ್ಟ ಪಾಲಿಕೆಗೆ ಭೇಟಿ ನೀಡ್ತಾರಾ?
ಜ.25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ*
ಶಿವಮೊಗ್ಗ ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಭ್ರಷ್ಟ ಪಾಲಿಕೆಗೆ ಭೇಟಿ ನೀಡ್ತಾರಾ?
ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಾನಗರ ಪಾಲಿಕೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜ.25 ರಂದು ಬೆಳಿಗ್ಗೆ 9.30 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಯೋಜಿಸಲಾಗಿದೆ,
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ್ ನಾಯಕ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾನ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ÷ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ.ಎಸ್., ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ. ಮಿಥುನ್ ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೇಮಂತ್ ಎನ್., ಅಪರ ಜಿಲ್ಲಾಧಿಕಾರಿ ಸಿದ್ದಲಿಂಗರೆಡ್ಡಿ, ಮಹಾನಗರಪಾಲಿಕೆ ಆಯುಕ್ತರಾದ ಡಾ. ಕವಿತಾ ಯೋಗಪ್ಪನವರ್, ಉಪವಿಭಾಗಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ಶಿವಮೊಗ್ಗ ತಹಶೀಲ್ದಾರ್ ವಿ.ಎಸ್. ರಾಜೀವ್, ಶಿವಮೊಗ್ಗ, ತಹಶೀಲ್ದಾರ್ ಪ್ರದೀಪ್ ಆರ್. ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶ್ರೀಮತಿ ಪ್ರಿಯಾ ಪಿ. ಇವರುಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲ್ಲಿದ್ದಾರೆ.