ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ದಿನಚರಿ ಬಿಡುಗಡೆ**ಮಾರ್ಚ್ ಒಳಗೆ ಕಾಮಗಾರಿಗಳು ಪೂರ್ಣಗೊಳಿಸಲು ಶಾಸಕರಿಗೆಲ್ಲ ಪತ್ರ**ಕಾಮಗಾರಿಗಳ ವೀಕ್ಷಣೆಗೆ ಜಿಲ್ಲಾ ಪ್ರವಾಸ**ಎಂ.ಎ.ಡಿ.ಬಿ.ಅಧ್ಯಕ್ಷ ಆರ್.ಎಂ.ಮಂಜುನಾಥಗೌಡರ ವಿವರಣೆ*

*ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ದಿನಚರಿ ಬಿಡುಗಡೆ*

*ಮಾರ್ಚ್ ಒಳಗೆ ಕಾಮಗಾರಿಗಳು ಪೂರ್ಣಗೊಳಿಸಲು ಶಾಸಕರಿಗೆಲ್ಲ ಪತ್ರ*

*ಕಾಮಗಾರಿಗಳ ವೀಕ್ಷಣೆಗೆ ಜಿಲ್ಲಾ ಪ್ರವಾಸ*

*ಎಂ.ಎ.ಡಿ.ಬಿ.ಅಧ್ಯಕ್ಷ ಆರ್.ಎಂ.ಮಂಜುನಾಥಗೌಡರ ವಿವರಣೆ*

ಕಳೆದ ಸಾಲಿನಲ್ಲಿ ಮಂಡಳಿ ವತಿಯಿಂದ ಮಂಜೂರಾಗಿರುವ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕಿದೆ ಎಂದು ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಅಧ್ಯಕ್ಷರಾದ ಆರ್.ಎಂ.ಮಂಜುನಾಥ ಗೌಡ ಹೇಳಿದರು.

ಗುರುವಾರ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಕಚೇರಿಯಲ್ಲಿ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿಯ 2025-26ನೇ ಸಾಲಿನ ಹೊಸ ದಿನಚರಿ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಕಳೆದ ಸಾಲಿನಲ್ಲಿ ಮಂಜೂರಾದ 954 ಕಾಮಗಾರಿಗಳ ಪೈಕಿ 335 ಕಾಮಗಾರಿಗಳು ಪೂರ್ಣಗೊಂಡಿವೆ. ಪೂರ್ಣಗೊಂಡ ಕೆಲವು ಕಾಮಗಾರಿಗಳಿಗೆ ಪಾವತಿಯೂ ಆಗಿದೆ. 282 ಕಾಮಗಾರಿಗಳಿಗೆ ಅನುಮೋದನೆ ನೀಡಿ ಏಜೆನ್ಸಿ ನಿಗದಿಗೊಳಿಸಲಾಗಿದೆ. ಮಾರ್ಚ್ ಒಳಗೆ ಬಾಕಿ ಉಳಿದ ಕಾಮಗಾರಿಗಳು ಪೂರ್ಣಗೊಳ್ಳಬೇಕಿದೆ. ಮಂಡಳಿಯಲ್ಲಿ ಸುಮಾರು ರೂ. 60 ರಿಂದ 70 ಕೋಟಿ ಅನುದಾನವೂ ಇದೆ. ಕಾಮಗಾರಿಗಳು ಶೀಘ್ರವಾಗಿ ಪೂರ್ಣಗೊಳ್ಳಬೇಕಿದೆ. ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವ ಸಂಬಂಧ ಶಾಸಕರಿಗೆ ಪತ್ರ ಬರೆಯಲಾಗಿದೆ ಎಂದರು.
ಜಿಲ್ಲೆಯಲ್ಲಿ ಮಂಡಳಿ ವತಿಯಿಂದ ಕಾಲುಸಂಕಗಳು, ಪೆವಿಲಿಯನ್, ಕುಂದಾದ್ರಿ ಬೆಟ್ಟದ ಬಳಿ, ಹುಂಚದಲ್ಲಿ ರಸ್ತೆ ಕಾಮಗಾರಿಗಳು ಸೇರಿದಂತೆ ಸುಮಾರು 1200 ಕಾಮಗಾರಿಗಳು ಪ್ರಗತಿಯಲ್ಲಿವೆ. ಜಿಲ್ಲೆಯ ಪ್ರವಾಸೋದ್ಯಮದ ದೃಷ್ಟಿಯಿಂದ ಕಾಲುಸಂಕ, ಸೇತುವೆ ಮತ್ತು ಇತರೆ ಕಾಮಗಾರಿಗಳಿಗೆ ರೂ.200 ಕೋಟಿ ನಬಾರ್ಡ್ ಅನುದಾನಕ್ಕೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುದಾನ ಮಂಜೂರಾದಲ್ಲಿ ಮುಂದಿನ ವರ್ಷದಿಂದ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. ಹಾಗೂ ಈ ಬಾರಿ ಪ್ರತಿ ಶಾಸಕರಿಗೆ ಮಂಡಳಿಯಿAದ ತಲಾ ರೂ.1 ಕೋಟಿ ಅನುದಾನ ನೀಡುವಂತೆ ಕೋರಲಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ಎಸ್.ಕೆ.ಮರಿಯಪ್ಪ, ಮಂಡಳಿ ಕಾರ್ಯದರ್ಶಿಗಳಾದ ಮೊಹಮ್ಮದ್ ನಜೀರ್, ಅಧೀನ ಕಾರ್ಯದರ್ಶಿ ಹನುಮಾನಾಯ್ಕ್, ಉಪ ನಿರ್ದೇಶಕ ಶಿವಾನಂದ ಕುದ್ರಿ, ಕಾರ್ಯಪಾಲಕ ಅಭಿಯಂತರ ವಿಜಯಕುಮಾರ್ ಹಾಜರಿದ್ದರು.