ಕವಿಸಾಲು
01
ಪೊಲೀಸ್ ಇಲಾಖೆಯಲ್ಲಿ ಧ್ವಜಾರೋಹಣ; ಉತ್ತಮ ಕರ್ತವ್ಯ ನಿರ್ವಹಿಸಿದವರಿಗೆ ಪ್ರಶಂಸನಾ ಪತ್ರ ನೀಡಿದ ಎಸ್ ಪಿ ಮಿಥುನ್ ಕುಮಾರ್
ಪೊಲೀಸ್ ಇಲಾಖೆಯಲ್ಲಿ ಧ್ವಜಾರೋಹಣ;
ಉತ್ತಮ ಕರ್ತವ್ಯ ನಿರ್ವಹಿಸಿದವರಿಗೆ ಪ್ರಶಂಸನಾ ಪತ್ರ ನೀಡಿದ ಎಸ್ ಪಿ ಮಿಥುನ್ ಕುಮಾರ್
76ನೇ ಗಣರಾಜ್ಯೋತ್ಸವದ ಅಂಗವಾಗಿ ಎಸ್ ಪಿ ಮಿಥುನ್ ಕುಮಾರ್ ಜಿ. ಕೆ ಐಪಿಎಸ್ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಇಂದು ಧ್ವಜಾರೋಹಣವನ್ನು ಮಾಡಿ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗಳಿಗೆ ಶುಭಾಶಯಗಳನ್ನು ಕೋರಿದರು ಹಾಗೂ ಶಿವಮೊಗ್ಗ ಜಿಲ್ಲಾ ಪೊಲೀಸ್ ನಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗಳಿಗೆ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಅಡಿಷನಲ್ ಎಸ್ ಪಿಗಳಾದ ಅನಿಲ್ ಕುಮಾರ್ ಭೂಮರೆಡ್ಡಿ, ಕಾರಿಯಪ್ಪ , ಡಿವೈಎಸ್ ಪಿ ಗಳಾದ ಬಾಬು ಆಂಜನಪ್ಪ, ಸಂಜೀವ್ ಕುಮಾರ್. ಟಿ, ಕೃಷ್ಣಮೂರ್ತಿ, ಕೃಷ್ಣಮೂರ್ತಿ ಟಿ.ಪಿ, ಹಾಗೂ ಶಿವಮೊಗ್ಗ ನಗರದ ಎಲ್ಲಾ ಪೊಲೀಸ್ ವೃತ್ತ ನಿರೀಕ್ಷಕರುಗಳು, ಪೊಲೀಸ್ ನಿರೀಕ್ಷಕರುಗಳು, ಪೊಲೀಸ್ ಉಪ ನಿರೀಕ್ಷಕರುಗಳು ಮತ್ತು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗಳು ಹಾಜರಿದ್ದರು.