ಶಿಕಾರಿಪುರದ ನೆಲವಾಗಿಲು ಗ್ರಾಮದಲ್ಲಿ ಫೆ.5ಕ್ಕೆತಾಲೂಕು ಮಟ್ಟದ ಕೃಷಿ ಮೇಳ
ಶಿಕಾರಿಪುರದ ನೆಲವಾಗಿಲು ಗ್ರಾಮದಲ್ಲಿ ಫೆ.5ಕ್ಕೆ
ತಾಲೂಕು ಮಟ್ಟದ ಕೃಷಿ ಮೇಳ
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಕೃಷಿ ವಿಜ್ಞಾನಿಗಳ ಮಹಾವಿದ್ಯಾಲಯ, ಇರುವಕ್ಕಿ ವತಿಯಿಂದ “ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ ೨೦೨೪-೨೫” ಯ ಅಡಿಯಲ್ಲಿ ಫೆಬ್ರುವರಿ 5 ರಂದು ಶಿಕಾರಿಪುರ ತಾಲ್ಲೂಕಿನ ನೆಲವಾಗಿಲು ಗ್ರಾಮದಲ್ಲಿ ಕೃಷಿ ಮೇಳವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಉದ್ಘಾಟಿಸಲು ಶ್ರೀ ಮಧು ಬಂಗಾರಪ್ಪ, ಕರ್ನಾಟಕ ಸರ್ಕಾರದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಆಗಮಿಸಲಿದ್ದಾರೆ. ಬೆಳೆ ಸಂಗ್ರಹಾಲಯದ ಉದ್ಘಾಟಕರಾಗಿ ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರರವರು ನೆರವೇರಿಸಲಿದ್ದಾರೆ, ವಸ್ತು ಪ್ರದರ್ಶನದ ಉದ್ಘಾಟನೆಯನ್ನು ವಿಧಾನಸಭಾ ಸದಸ್ಯರಾದ ಶ್ರೀ ಬಿ.ವೈ. ವಿಜಯೇಂದ್ರ ರವರು ಮಾಡಲಿದ್ದಾರೆ ಹಾಗೂ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಜಗದೀಶ್ ರವರು ಮತ್ತು ವಿವಿಧ ಕೃಷಿ ಮತ್ತು ಅಭಿವೃದ್ಧಿ ಇಲಾಖೆಗಳಿಂದ ಅಧಿಕಾರಿಗಳು ಉಪಸ್ಥಿತರಿರುತ್ತಾರೆ.
ಈ ಕೃಷಿ ಮತ್ತು ಕಲೆಗಳ ಉತ್ಸವದಲ್ಲಿ ಹಲವು ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಹಾಗೂ ವಿಭಿನ್ನ ಕೃಷಿ ಮಳಿಗೆಗಳನ್ನು ಹಾಕುವುದಕ್ಕಾಗಿ ವ್ಯವಸ್ಥೆ ಮಾಡಲಾಗಿದೆ ಇದರಲ್ಲಿ ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಜೇನು ಸಾಕಾಣಿಕೆ, ಮೌಲ್ಯವರ್ಧಿತ ಕೃಷಿ ಉತ್ಪನ್ನಗಳು, ಕೃಷಿ ಪರಿಕರಗಳು ಮತ್ತು ಯಂತ್ರೋಪಕರಣಗಳ ಮತ್ತು ಇನ್ನಿತರ ಪ್ರದರ್ಶನ ಏರ್ಪಡಿಸಲಾಗಿದೆ. ಸುಮಾರು 100 ಕ್ಕೂ ಹೆಚ್ಚು ಮಳಿಗೆಗಳು ಇರುತ್ತದೆ.
ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ವಿಜ್ಞಾನಿಗಳು ರೈತರ ಜೊತೆ ಚರ್ಚಾಗೋಷ್ಠಿಯನ್ನು ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ರೈತ ಮಹಿಳೆಯರಿಗೆ ಮತ್ತು ಪ್ರಗತಿಪರ ರೈತರಿಗೆ ಸನ್ಮಾನವನ್ನು ಏರ್ಪಡಿಸಲಾಗಿದೆ.
ಎಲ್ಲಾ ರೈತ ಬಾಂಧವರು ತಮ್ಮ ಕುಟುಂಬದ ಸಮೇತ ಈ ಕಾರ್ಯಕ್ರಮಕ್ಕೆ ಆಗಮಿಸಿ ಉಪಯುಕ್ತ ಮಾಹಿತಿ ಪಡೆಯುವುದರ ಮೂಲಕ ಕೃಷಿ ಮೇಳವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಿಕೊಳ್ಳುತ್ತೇವೆ.