ನಗರಾಭಿವೃದ್ಧಿ ಸಚಿವ ಭೈರತಿ ಭೇಟಿ ಮಾಡಿದ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದ ಅಭಿವೃದ್ಧಿ ಬಗ್ಗೆ ಚರ್ಚಿಸಿದ್ದೇನು?
ನಗರಾಭಿವೃದ್ಧಿ ಸಚಿವ ಭೈರತಿ ಭೇಟಿ ಮಾಡಿದ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದ ಅಭಿವೃದ್ಧಿ ಬಗ್ಗೆ ಚರ್ಚಿಸಿದ್ದೇನು?![](https://malenaduexpress.com/wp-content/uploads/2025/02/IMG-20250215-WA0392-1024x683.jpg)
ನಗರಾಭಿವೃದ್ಧಿ ಇಲಾಖೆ ಸಚಿವರಾದ ಬೈರತಿ ಸುರೇಶ್ ಅವರನ್ನು ಇಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರು ಭೇಟಿ ಮಾಡಿ, ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಅಭಿವೃದ್ದಿ ವಿಷಯಗಳ ಕುರಿತು ಚರ್ಚಿಸಿ ವಿವಿಧ ಕಾಮಗಾರಿಗಳಿಗೆ ತಕ್ಷಣ ಹಣ ಬಿಡುಗಡೆಗೊಳಿಸುವಂತೆ ಮನವಿ ಮಾಡಲಾಯಿತು.
ಶಿವಮೊಗ್ಗ ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅನುದಾನದಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳ ಅನುದಾನ ಮಂಜೂರು ಮಾಡುವಂತೆ ಮನವಿ ಮಾಡಿದರು.
ಬಹು ಮುಖ್ಯವಾಗಿ ಸುಮಾರು 700 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಯೋಗದೊಂದಿಗೆ ಸೊರಬ ತಾಲೂಕಿನ 331 ಗ್ರಾಮಗಳು ಹಾಗೂ ಸೊರಬ, ಶಿರಾಳಕೊಪ್ಪ ಪುರಸಭೆ, ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಶರಾವತಿ ನದಿಯಿಂದ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಅನುದಾನ ಮಂಜೂರು ಮಾಡುವಂತೆ ಒತ್ತಾಯಿಸಿದರು.
ಸೊರಬ ಪುರಸಭೆ ವ್ಯಾಪ್ತಿಯಲ್ಲಿ ಸುಮಾರು 135 ಕೋಟಿ ಮೊತ್ತದ ಒಳಚರಂಡಿ ವ್ಯವಸ್ಥೆ ಹಾಗೂ ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 85 ಕೋಟಿ ಮೊತ್ತದ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಯೋಜನೆಯನ್ನು ಮಂಜೂರು ಮಾಡುವಂತೆ ಈ ಸಂದರ್ಭದಲ್ಲಿ ಕೋರಲಾಯಿತು.