ನಿವೇಶನ-ಕಟ್ಟಡಗಳಿಗೆ ಇ-ಖಾತೆ ಪಡೆಯಲು ಅವಕಾಶ* 2024 ರ ಸೆ. 10 ರ ಅಂತ್ಯದವರೆಗೆ ಅನಧಿಕೃತ ಬಡಾವಣೆಗಳಲ್ಲ ನಿರ್ಮಿಸಿಕೊಂಡಿರುವ ನಿವೇಶನಗಳ/ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ದಾಖಲೆ ಸಲ್ಲಿಸಿ ಮೂರು ತಿಂಗಳೊಳಗೆ ಇ-ಖಾತಾ ಪಡೆಯಿರಿ ಎಂದ ಸರ್ಕಾರ
*ನಿವೇಶನ-ಕಟ್ಟಡಗಳಿಗೆ ಇ-ಖಾತೆ ಪಡೆಯಲು ಅವಕಾಶ*
2024 ರ ಸೆ. 10 ರ ಅಂತ್ಯದವರೆಗೆ ಅನಧಿಕೃತ ಬಡಾವಣೆಗಳಲ್ಲ ನಿರ್ಮಿಸಿಕೊಂಡಿರುವ ನಿವೇಶನಗಳ/ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ
ದಾಖಲೆ ಸಲ್ಲಿಸಿ ಮೂರು ತಿಂಗಳೊಳಗೆ ಇ-ಖಾತಾ ಪಡೆಯಿರಿ ಎಂದ ಸರ್ಕಾರ
ಶಿವಮೊಗ್ಗ, ಮಹಾನಗರ ಪಾಲಿಕೆ ಹಾಗೂ ಪೌರಸಭೆಗಳ ವ್ಯಾಪ್ತಿಗಳಲ್ಲಿರುವ ನಿವೇಶನಗಳು /ಕಟ್ಟಡಗಳಿಗೆ ಎ-ಖಾತಾ ಮತ್ತು ಬಿ-ಖಾತಾ ಪಡೆಯಲು ಕರ್ನಾಟಕ ಪೌರಸಭೆಗಳ ತೆರಿಗೆ ನಿಯಮ 2025 ಮತ್ತು ಮಹಾನಗರ ಪಾಲಿಕೆಗಳ ತೆರಿಗೆ ನಿಯಮ 2025 ರಲ್ಲಿ ಅವಕಾಶ ಕಲ್ಪಿಸಲಾಗಿದೆ.
2024 ರ ಸೆ. 10 ರ ಅಂತ್ಯದವರೆಗೆ ಅನಧಿಕೃತ ಬಡಾವಣೆಗಳಲ್ಲ ನಿರ್ಮಿಸಿಕೊಂಡಿರುವ ನಿವೇಶನಗಳ/ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದ್ದು, ಇಂತಹ ಪ್ರಕರಣಗಳ ವ್ಯಾಪ್ತಿಗೆ ಬರುವ ಆಸ್ತಿ ಮಾಲೀಕರು ತಮ್ಮ ವ್ಯಾಪ್ತಿಯ ಮಹಾನಗರಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ದಾಖಲೆಗಳನ್ನು ಸಲ್ಲಿಸಿ ಇ-ಖಾತೆಯನ್ನು ಪಡೆಯಬಹುದಾಗಿದೆ.
ಎ-ಖಾತಾ ಪಡೆಯಲು ಆಸ್ತಿಗೆ ಸಂಬAಧಿಸಿದAತೆ ಸ್ವತ್ತಿನ ಮಾಲೀಕÀತ್ವ ಸಾಬೀತು ಮಾಡಿಸುವ ನೊಂದಾಯಿತ ಮಾರಾಟ ಪತ್ರ / ದಾನ ಪತ್ರ/ ವಿಭಾಗ ಪತ್ರಗಳು ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕು ಪತ್ರಗಳು/ ಮಂಜೂರಾತಿ ಪತ್ರಗಳು ಕಂದಾಯ ಇಲಾಖೆಯಿಂದ 94 ಸಿಸಿ ಅಡಿ ನೀಡಲಾದ ಹಕ್ಕು ಪತ್ರ, ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ಧೃಡೀಕೃತ ಪ್ರತಿ ಮತ್ತು ನಿವೇಶನಗಳ ಬಿಡುಗಡೆ ಪತ್ರ, ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ, ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ, ಮಾಲೀಕರ ಪೋಟೋ ಮತ್ತು ಸ್ವತ್ತಿನ ಫೋಟೋ, ಮಾಲೀಕರ ಗುರುತಿನ ದಾಖಲೆಯ ಪ್ರತಿ ಸಲ್ಲಿಸಬೇಕು.
ಹಾಗೂ ಬಿ-ಖಾತಾ ಪಡೆಯಲು ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತು ಪಡಿಸಲು 2024 ಸೆ.10 ರ ಪೂರ್ವದಲ್ಲಿ ನೊಂದಾಯಿತ ಮಾರಾಟ ಪತ್ರಗಳು/ದಾನ ಪತ್ರ/ವಿಭಾಗ ಪತ್ರಗಳು/ಹಕ್ಕು ಖುಲಾಸೆ ಪತ್ರಗಳು, ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ, ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ, ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ, ಮಾಲೀಕರ ಗುರುತಿನ ದಾಖಲೆಯ ಚೀಟಿ ಪ್ರತಿಯನ್ನು ಸಲ್ಲಿಸಬೇಕು. ಈ ಎಲ್ಲಾ ದಾಖಲೆಗಳನ್ನು ಈ ಪ್ರಕಟಣೆ ದಿನಾಂಕದಿಂದ ಮೂರು ತಿಂಗಳೊಳಗೆ ಸಲ್ಲಿಸಿ, ಇ-ಖಾತೆಯನ್ನು ಪಡೆಯುಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ತಿಳಿಸಿದ್ದಾರೆ.