ಶಿವಮೊಗ್ಗದ ಮಹಾಜನತೆ ಓದಲೇಬೇಕಾದ ಮತ್ತು ಸ್ಪಂದಿಸಲೇಬೇಕಾದ ಸುದ್ದಿ ಇದು… *ಸ್ಥಿರಾಸ್ತಿ ಮಾರ್ಗಸೂಚಿ ದರಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ*
ಶಿವಮೊಗ್ಗದ ಮಹಾಜನತೆ ಓದಲೇಬೇಕಾದ ಮತ್ತು ಸ್ಪಂದಿಸಲೇಬೇಕಾದ ಸುದ್ದಿ ಇದು…
*ಸ್ಥಿರಾಸ್ತಿ ಮಾರ್ಗಸೂಚಿ ದರಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ*
ಶಿವಮೊಗ್ಗ:
ನೋಂದಣಿ ಮತ್ತು ಮುದ್ರಾಂಕ ಇಲಾಖೆಯು 2023-24ನೇ ಸಾಲಿಗೆ ಶಿವಮೊಗ್ಗ ತಾಲೂಕು ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರ್ಗಸೂಚಿ ದರಪಟ್ಟಿಯಲ್ಲಿ ಶಿವಮೊಗ್ಗ ತಾಲೂಕು, ನಿದಿಗೆ ಮತ್ತು ಮಾಚೇನಹಳ್ಳಿ ಕೈಗಾರಿಕಾ ಪ್ರದೇಶಗಳ ದರಗಳನ್ನು ಹಾಗೂ ಕೇಂದ್ರ ಮೌಲ್ಯಮಾಪನ ಸಮಿತಿಯಿಂದ ಅನುಮೋದನೆಗೊಂಡ ಬಡಾವಣೆಗಳ ದರಗಳನ್ನು ಹಿರಿಯ ಉಪನೋಂದಣಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಿದ್ದು, ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿದೆ.
ಈ ಸಂಬಂಧ ಆಕಷೇಪಣೆಗಳು ಇದ್ದಲ್ಲಿ ಸಾರ್ವಜನಿಕರು ಸೂಕ್ತ ದಾಖಲೆಗಳೊಂದಿಗೆ ಈ ಪ್ರಕಟಣೆಗೊಂಡ 10 ದಿನಗಳೊಳಗಾಗಿ ಹಿರಿಯ ಉಪನೋಂದಣಾಧಿಕಾರಿಗಳ ಕಚೇರಿಗೆ ಲಿಖಿತವಾಗಿ ಸಲ್ಲಿಸುವಂತೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
—————–