IND vs PAK: ಭಾರತ- ಪಾಕ್ ಪಂದ್ಯ ಎಷ್ಟು ಗಂಟೆಗೆ ಆರಂಭ?* *ಏನು ವಿಶೇಷ? ಯಾಕೆ ಈ ಪಂದ್ಯ ಮುಖ್ಯ?*
*IND vs PAK: ಭಾರತ- ಪಾಕ್ ಪಂದ್ಯ ಎಷ್ಟು ಗಂಟೆಗೆ ಆರಂಭ?*
*ಏನು ವಿಶೇಷ? ಯಾಕೆ ಈ ಪಂದ್ಯ ಮುಖ್ಯ?*
2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಐದನೇ ಪಂದ್ಯದಲ್ಲಿ ಎ ಗುಂಪಿನ ಎರಡು ಬಲಿಷ್ಠ ತಂಡಗಳು ಮುಖಾಮುಖಿಯಾಗಲಿವೆ. ಟೀಂ ಇಂಡಿಯಾ ಮತ್ತು ಪಾಕಿಸ್ತಾನ ನಡುವಿನ ಜಿದ್ದಾಜಿದ್ದಿನ ಹಣಾಹಣಿ ಫೆಬ್ರವರಿ 23 ರಂದು ದುಬೈನಲ್ಲಿ ನಡೆಯಲ್ಲಿದೆ. ಕಳೆದ ಹಲವು ದಿನಗಳಿಂದ ಕ್ರಿಕೆಟ್ ಜಗತ್ತು ಈ ಪಂದ್ಯಕ್ಕಾಗಿ ಕಾಯುತ್ತಿದೆ. ಈಗ ಈ ಪಂದ್ಯಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಎರಡೂ ತಂಡಗಳಿಗೆ ಇದು ಈ ಟೂರ್ನಿಯ ಎರಡನೇ ಪಂದ್ಯವಾಗಿದೆ. ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 6 ವಿಕೆಟ್‌ಗಳಿಂದ ಸೋಲಿಸಿರುವ ಭಾರತ ತಂಡ ಈ ಟೂರ್ನಿಯಲ್ಲಿ ಗೆಲುವಿನ ಆರಂಭವನ್ನು ಪಡೆದುಕೊಂಡಿತು. ಆದರೆ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ ತಂಡ, ನ್ಯೂಜಿಲೆಂಡ್ ವಿರುದ್ಧ ಹೀನಾಯವಾಗಿ ಸೊತ್ತಿತ್ತು. ಹೀಗಾಗಿ ನಾಳಿನ ಪಂದ್ಯ ಪಾಕ್ ಪಾಲಿಗೆ ನಿರ್ಣಾಯಕವಾಗಿದೆ.
*ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಯಾವಾಗ?*
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಫೆಬ್ರವರಿ 23 ರ ಭಾನುವಾರದಂದು ನಡೆಯಲಿದೆ.
*ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಎಲ್ಲಿ ನಡೆಯಲಿದೆ?*
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2:30 ಕ್ಕೆ ಆರಂಭವಾಗಲಿದೆ. ಹಾಗಾಗಿ ಟಾಸ್ 2 ಗಂಟೆಗೆ ನಡೆಯಲಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಮತ್ತು ಸ್ಪೋರ್ಟ್ಸ್ 18 ನೆಟ್‌ವರ್ಕ್‌ಗಳ ಚಾನೆಲ್‌ಗಳಲ್ಲಿ ಟಿವಿಯಲ್ಲಿ ಪ್ರಸಾರ ಮಾಡಲಾಗುತ್ತದೆ
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಜಿಯೋ-ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಮೊಬೈಲ್‌ನಲ್ಲಿ ಲಭ್ಯವಿರುತ್ತದೆ.
ಉಭಯ ತಂಡಗಳು
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜ ಮತ್ತು ವರುಣ್ ಚಕ್ರವರ್ತಿ.
ಪಾಕಿಸ್ತಾನ ತಂಡ: ಮೊಹಮ್ಮದ್ ರಿಜ್ವಾನ್ (ನಾಯಕ ಮತ್ತು ವಿಕೆಟ್ ಕೀಪರ್), ಬಾಬರ್ ಆಝಂ, ಕಮ್ರಾನ್ ಗುಲಾಮ್, ಸಲ್ಮಾನ್ ಆಘಾ, ತಯ್ಯಬ್ ತಾಹಿರ್, ಖುಷ್ದಿಲ್ ಶಾ, ಫಹೀಮ್ ಅಶ್ರಫ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಅಬ್ರಾರ್ ಅಹ್ಮದ್, ಹ್ಯಾರಿಸ್ ರೌಫ್, ಮೊಹಮ್ಮದ್ ಹಸ್ನೈನ್, ಉಸ್ಮಾನ್ ಖಾನ್ ಮತ್ತು ಸೌದ್ ಶಕೀಲ್.