ಭಾರತದ ಮಡಿಲಿಗೆ ಚಾಂಪಿಯನ್ಸ್ ಟ್ರೋಫಿ*
*ಭಾರತದ ಮಡಿಲಿಗೆ ಚಾಂಪಿಯನ್ಸ್ ಟ್ರೋಫಿ*
: 2025ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಅದ್ಭುತ ಗೆಲುವು ಸಾಧಿಸಿದೆ. ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ 5 ವಿಕೆಟ್‌ಗಳ ಅಂತರದಿಂದ ಗೆಲುವು ಸಾಧಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿಹಿಡಿದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 251 ರನ್ ಗಳಿಸಿತು. ಭಾರತ ಸುಲಭವಾಗಿ ಗೆಲುವಿನ ಗುರಿ ತಲುಪಿತು.
ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ 2025 ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಅಮೋಘ ಗೆಲುವು ಸಾಧಿಸಿದೆ. ತೀರ ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಬಲಿಷ್ಠ ಕಿವೀಸ್ ತಂಡವನ್ನು 5 ವಿಕೆಟ್ಗಳಿಂದ ಮಣಿಸಿದ ರೋಹಿತ್ ಪಡೆ ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿಹಿಡಿದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ 7 ವಿಕೆಟ್‌ಗಳನ್ನು ಕಳೆದುಕೊಂಡು 251 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಸುಲಭವಾಗಿ ಗೆಲುವಿನ ದಡ ಮುಟ್ಟಿತು.