ರನ್ಯಾರಾವ್ ಚಿನ್ನ ಸಾಗಾಟ ಪ್ರಕರಣ;* *ನಾಳೆ ಸದನದಲ್ಲಿ ಆ ಇಬ್ಬರು ಸಚಿವರ ಹೆಸರು ನಿಜವಾಗಲೂ ಹೇಳುವರಾ ಯತ್ನಾಳ್?* *ಹಾಗಾದರೆ, ಯಾರು ಆ ಇಬ್ಬರು ಸಚಿವರು?*

*ರನ್ಯಾರಾವ್ ಚಿನ್ನ ಸಾಗಾಟ ಪ್ರಕರಣ;*

*ನಾಳೆ ಸದನದಲ್ಲಿ ಆ ಇಬ್ಬರು ಸಚಿವರ ಹೆಸರು ನಿಜವಾಗಲೂ ಹೇಳುವರಾ ಯತ್ನಾಳ್?*

*ಹಾಗಾದರೆ, ಯಾರು ಆ ಇಬ್ಬರು ಸಚಿವರು?*

ನಟಿ ರನ್ಯಾ ರಾವ್ (Ranya Rao) ವಿದೇಶಗಳಿಂದ ಚಿನ್ನ ಅಕ್ರಮ ಸಾಗಾಟ (Gold Smuggling) ಮಾಡಿರುವ ವಿಚಾರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ (Basanagouda Patil Yatnal) ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಇಡೀ ಪ್ರಕರಣ ಕುರಿತು ಸೋಮವಾರ ಸದನದಲ್ಲಿ ಮಾತನಾಡುವೆ. ಆಕೆಯೊಂದಿಗೆ ಸಂಪರ್ಕವಿರುವ ಇಬ್ಬರು ಸಚಿವರ ಹೆಸರನ್ನು ಸದನದಲ್ಲಿ ಹೇಳುವೆ. ಈಗ ಆ ಬಗ್ಗೆ ಮಾಧ್ಯಮಗಳ ಮುಂದೆ ಹೇಳುವುದಿಲ್ಲ. ಇದು ಸದನದ ರಹಸ್ಯ ಎಂದರು. ಆಕೆಗೆ ಪ್ರೊಟೋಕಾಲ್ ಕೊಟ್ಟವರ ಮಾಹಿತಿ ಸಂಗ್ರಹ ಮಾಡಿದ್ದೇವೆ. ಚಿನ್ನ ಎಲ್ಲಿಂದ ತಂದಿದ್ದಾರೆ? ಎಲ್ಲಿಟ್ಟು ತಂದಿದ್ದಾರೆ ಎಂಬುದು ಗೊತ್ತಿದೆ ಎಂದು ಯತ್ನಾಳ್ ಹೇಳಿದರು.

ರನ್ಯಾ ಪ್ರಕರಣದಲ್ಲಿ ಕೇಂದ್ರದ ಕಸ್ಟಮ್ಸ್ ಆಧಿಕಾರಿಗಳೂ ತಪ್ಪು ಮಾಡಿದ್ದಾರೆಂದು ಸಚಿವ ಸಂತೋಷ್ ಲಾಡ್ ಆರೋಪಿಸಿದ್ದರು. ಈ ವಿಚಾರವಾಗಿ ಪ್ರತಿಕ್ರಿಯಿಸಿದ ಯತ್ನಾಳ್, ಯಾರು ತಪ್ಪು ಮಾಡಿದ್ದರೂ ಅದು ತಪ್ಪೇ. ಕಸ್ಟಮ್ಸ್ ಆಧಿಕಾರಿಗಳು ತಪ್ಪು ಮಾಡಿದ್ದರೆ ನಾವು ಬಿಜೆಪಿಯವರು ಸಮರ್ಥನೆ ಮಾಡಿಕೊಳ್ಳುತ್ತಿಲ್ಲ. ಕೇಂದ್ರದ ಅಧಿಕಾರಿಗಳ ತಪ್ಪಿದ್ದರೆ ಅದು ಕೂಡ ತಪ್ಪೇ ಎಂದರು.

ರನ್ಯಾಗೆ ಕೆಐಎಡಿಬಿಯಿಂದ 12 ಎಕರೆ ಜಮೀನು ಕೊಟ್ಟ ವಿಚಾರವಾಗಿ ಪ್ರತಿಕ್ರಿಯಿಸಿ, ಜಮೀನು ಕೊಟ್ಟಿದ್ದನ್ನು ಸ್ವತಃ ಮುರುಗೇಶ್ ನಿರಾಣಿ ಒಪ್ಪಿಕೊಂಡಿದ್ದಾರೆ. 12 ಏಕರೆ ಜಮೀನು ಕೊಟ್ಟಿದ್ದು, ಹಣ ಪಾವತಿ ಮಾಡದ ಕಾರಣ ಅದು ರದ್ದಾಗಿದೆ. 12 ಎಕರೆ ಜಮೀನಿಗೆ ಯಾರೋ ಒಬ್ಬರು ಹಣ ಕೊಡುತ್ತೇನೆ ಎಂದಿದ್ದರು. ಅವರು ಕೊಟ್ಟಿಲ್ಲ. ಹಾಗಾಗಿ ಜಮೀನು ಹಂಚಿಕೆ ಹಾಗಾಗಿ ರದ್ದಾಗಿದೆ ಎಂದರು.

ನಮ್ಮ ರಾಜ್ಯಾಧ್ಯಕ್ಷನಂತೂ ಹೊಂದಾಣಿಕೆ ಗಿರಾಕಿ. ವಿಜಯೇಂದ್ರ ಅಡ್ಜೆಸ್ಟ್ಮೆಂಟ್ ಗಿರಾಕಿ. ವಿಜಯೇಂದ್ರ ಏನೂ ಮಾತನಾಡಡುವುದಿಲ್ಲ. ಅವರಿಂದ ನ್ಯಾಯ ಸಿಗಲ್ಲ ಎಂಬುದು ಗೊತ್ತಾಗಿದೆ. ಹಾಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಯತ್ನಾಳ್ ಹೇಳಿದರು.