ದಿ.ಎಸ್.ಬಂಗಾರಪ್ಪನವರ ಪುತ್ಥಳಿ ಸ್ಥಾಪನೆ: ಕ್ರಮಕ್ಕೆ ಡಿ.ಕೆ.ಶಿವಕುಮಾರ್ ಸೂಚನೆ* *ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಸ್ಥಳ ನೀಡಲು ಸಿಮ್ಸ್ ನಿರ್ದೇಶಕರಿಗೆ ಮನವಿ*
*ದಿ.ಎಸ್.ಬಂಗಾರಪ್ಪನವರ ಪುತ್ಥಳಿ ಸ್ಥಾಪನೆ: ಕ್ರಮಕ್ಕೆ ಡಿ.ಕೆ.ಶಿವಕುಮಾರ್ ಸೂಚನೆ*
*ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಸ್ಥಳ ನೀಡಲು ಸಿಮ್ಸ್ ನಿರ್ದೇಶಕರಿಗೆ ಮನವಿ*
ಶಿವಮೊಗ್ಗ: ನಗರದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ದಿ.ಎಸ್. ಬಂಗಾರಪ್ಪನವರ ಪುತ್ಥಳಿ ಸ್ಥಾಪಿಸಲು ಅಗತ್ಯವಾದ ಸ್ಥಳ ನೀಡಬೇಕೆಂದು ಕೋರಿ ದಿ.ಎಸ್. ಬಂಗಾರಪ್ಪನವರ ಕಂಚಿನ ಪ್ರತಿಮೆ ಪ್ರತಿಷ್ಠಾನ ಸಮಿತಿ ವತಿಯಿಂದ ಇಂದು ಸೋಮವಾರ ಬೆಳಿಗ್ಗೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.
ನಾಡು ಕಂಡ ಧೀಮಂತ ರಾಜಕಾರಣಿ, ಬಡವರ ಬಂಧು, ಅಲ್ಪಸಂಖ್ಯಾತರು, ದಲಿತರು, ಹಿಂದುಳಿದವರು ಸೇರಿದಂತೆ ಎಲ್ಲಾ ವರ್ಗದವರ ಕ್ಷೇಯೋಭಿವೃದ್ಧಿಗೆ ಶ್ರಮಿಸಿದ ಜನಪರ ನಾಯಕ, ದಿಟ್ಟ ಹೋರಾಟಗಾರ, ಮಾಜಿ ಮುಖ್ಯಮಂತ್ರಿ ದಿ.ಎಸ್. ಬಂಗಾರಪ್ಪನವರ ಕಂಚಿನ ಪುತ್ಥಳಿಯನ್ನು ಮೆಗ್ಗಾನ್ ಆಸ್ಪತ್ರೆ (ಜಿಲ್ಲಾ ಸಾರ್ವಜನಿಕ ಆಸ್ಪತ್ರೆ) ಆವರಣದಲ್ಲಿ ಸ್ಥಾಪಿಸಬೇಕೆಂದು ಕೋರಿ ರಾಜ್ಯ ಸರ್ಕಾರಕ್ಕೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸದರಿ ಮನವಿಯನ್ನು ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರನ್ನು ಕೋರಲು ತಮ್ಮ ಹೆಚ್ಚುವರಿ ಆಪ್ತ ಕಾರ್ಯದರ್ಶಿ ನಿರ್ದೇಶಿಸಿದ್ದಾರೆ. ಆದ್ದರಿಂದ ಅವರು 10×20 ಸ್ಥಳ ನೀಡುವ ಸಂಬAಧ ಟಿಪ್ಪಣಿ ಪತ್ರ ನೀಡಿದ್ದಾರೆ.
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ಸೌಲಭ್ಯವನ್ನು ಹೊಂದಿರುವ ಅತ್ಯುತ್ತಮ ಆಸ್ಪತ್ರೆಗಳಲ್ಲಿ ಮೆಗ್ಗಾನ್ ಆಸ್ಪತ್ರೆ ಸಹ ಒಂದಾಗಿದೆ. ಇದರಿಂದಾಗಿ ಜಿಲ್ಲೆಯಷ್ಟೇ ಅಲ್ಲ, ಬೇರೆ ಜಿಲ್ಲೆಗಳಿಂದಲೂ ಸಹ ರೋಗಿಗಳು ಚಿಕಿತ್ಸೆ ಪಡೆಯಲು ಇಲ್ಲಿಗೆ ಬರುತ್ತಿದ್ದಾರೆ. ಇಂತಹ ಆಸ್ಪತ್ರೆ ಸ್ಥಾಪನೆಗೆ ಅಡಿಗಲ್ಲು ಹಾಕಿದ ಕೀರ್ತಿ ಮಾನ್ಯ ಶ್ರೀ ಬಂಗಾರಪ್ಪನವರಿಗೆ ಸಲ್ಲುತ್ತದೆ. ಆದ್ದರಿಂದ ಈ ಆಸ್ಪತ್ರೆಯ ಆವರಣದಲ್ಲಿ ಅವರ ಪ್ರತಿಮೆ ಸ್ಥಾಪಿಸುವುದು ಸೂಕ್ತವಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ದಿ.ಎಸ್. ಬಂಗಾರಪ್ಪನವರ ಕಂಚಿನ ಪ್ರತಿಮೆ ಪ್ರತಿಷ್ಠಾನ ಸಮಿತಿ ಅಧ್ಯಕ್ಷ ಹಾಗೂ ಹಾಗೂ ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಆರ್. ಮೋಹನ್, ಉಪಾಧ್ಯಕ್ಷ ಹಾಗೂ ಬೀದಿ ಬದಿಯ ವ್ಯಾಪಾರಿ ಸಂಘದ ರಾಜ್ಯಾಧ್ಯಕ್ಷ ಶಂಕರ್ ರಾಕೇಶ್, ಉಪಾಧ್ಯಕ್ಷರು ಹಾಗೂ ಒಲಿಂಪಿಕ್ ಸ್ಪೋರ್ಟ್ಸ್ ಅಸೋಷಿಯೇಷನ್ ಅಧ್ಯಕ್ಷ ಶಶಿಕುಮಾರ್, ಸಮಿತಿಯ ಸಂಚಾಲಕರು ಹಾಗೂ ಕಾನೂನು ಸಲಹೆಗಾರ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಧರ್ಮರಾಜ್, ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ಪತ್ರಕರ್ತ ಹಾಲೇಶ್ ಆರ್., ಸಮಿತಿಯ ಕಾರ್ಯದರ್ಶಿ ಹಾಗೂ ಕಾರಾಗೃಹ ಸಮಿತಿಯ ಮಾಜಿ ಸದಸ್ಯರು ಹಾಗೂ ತಮಿಳು ಸಮಾಜದ ಯುವ ಮುಖಂಡ ತಂಗರಾಜ್, ಸಮಿತಿಯ ಖಜಾಂಚಿ ಹಾಗೂ ನಿವೃತ್ತ ಪೊಲೀಸ್ ಸಬ್ ಇನ್ಸಪೆಕ್ಟರ್ ರಾಮಚಂದ್ರ ನಾಯ್ಕ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಗೌರವಧ್ಯಕ್ಷರು ಹಾಗೂ ಹಾಲಿ ನಿರ್ದೇಶಕ ಎಸ್.ವೈ. ರಮೇಶ್, ಎಇಇ ಯಶವಂತ ನಾಯ್ಕ್, ದೈಹಿಕ ಶಿಕ್ಷಕ ಮೈಕಲ್ ಕಿರಣ್, ಬೀದಿಬದಿಯ ವ್ಯಾಪಾರಿ ಸಂಘದ ಜಿಲ್ಲಾಧ್ಯಕ್ಷ ಚೆನ್ನವೀರಪ್ಪ ಗಾಮನಗಟ್ಟಿ, ಬಸವೇಶ್ವರ ಪಟ್ಟಣ ಪತ್ತಿನ ಸಹಕಾರ ಸಂಘದ ಸದಸ್ಯ ಚನ್ನೇಶ್ ಎಂ.ಜೆ., ಕಾಂಗ್ರೆಸ್ ಮುಖಂಡ ಗಣೇಶ್ ಚಿಕ್ಕಮರಡಿ, ಮರಾಠಿ ಸಮಾಜದ ಮುಖಂಡ ವಿಜಯ ಕುಮಾರ್ ಯಲವಟ್ಟಿ, ಗಂಗಾಮತ ಸಮಾಜದ ಮುಖಂಡ ಹನುಮೇಶ್, ಕುಳುವ ಯುವ ಸೇನಾ ಜಿಲ್ಲಾಧ್ಯಕ್ಷ ಲೋಕೇಶ್, ಬೆಸ್ತಾರ್ ಸಮಾಜದ ಮುಖಂಡ ದೇವೇಂದ್ರಪ್ಪ ಹೆಚ್., ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ಸಿದ್ದಪ್ಪ, ಕುಸ್ತಿಪಟು ಘನಶ್ಯಾಂ ಮತ್ತಿತರರು ಉಪಸ್ಥಿತರಿದ್ದರು.