ಶಿವಮೊಗ್ಗ ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಎರಡು ದಿನ ಮಳೆ*
*ಶಿವಮೊಗ್ಗ ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಎರಡು ದಿನ ಮಳೆ*
ಕರ್ನಾಟಕದಲ್ಲಿ ಕೆಲವೆಡೆ ಗರಿಷ್ಠ ಉಷ್ಣಾಂಶದಲ್ಲಿ ಹೆಚ್ಚಳವಾಗಿದ್ದರೂ, ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಕ್ಯಾಸಲ್ರಾಕ್, ಜೋಯಿಡಾ, ಕುಮಟಾ, ಯಲ್ಲಾಪುರ, ಕಾರ್ಕಳ, ಸಂಕೇಶ್ವರ, ಶಿರಹಟ್ಟಿ, ಲಕ್ಷ್ಮೀಪುರ, ಧಾರವಾಡ, ಕೆಆರ್ ನಗರ, ಹುಂಚದಕಟ್ಟೆ, ಶೃಂಗೇರಿ, ಜಯಪುರ, ಸಾಗರದಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ 18.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 20.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 36.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 35.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 38.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ35.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.