ನ್ಯಾಮತಿ SBI ಬ್ಯಾಂಕ್ ದರೋಡೆ:* *ಪಾಳು ಬಾವಿಯಲ್ಲಿತ್ತು ಕದ್ದ 17 ಕೆಜಿ ಚಿನ್ನ* *ಸಾಲ ಕೊಡಲಿಲ್ಲ ಅಂತ ಸಹೋದರರ ದರೋಡೆ!*
*ನ್ಯಾಮತಿ SBI ಬ್ಯಾಂಕ್ ದರೋಡೆ:*
*ಪಾಳು ಬಾವಿಯಲ್ಲಿತ್ತು ಕದ್ದ 17 ಕೆಜಿ ಚಿನ್ನ*
*ಸಾಲ ಕೊಡಲಿಲ್ಲ ಅಂತ ಸಹೋದರರ ದರೋಡೆ!*
ದಾವಣಗೆರೆ ಜಿಲ್ಲೆಯ ನ್ಯಾಮತಿ ಎಸ್‍ಬಿಐ ಬ್ಯಾಂಕ್ ದರೋಡೆ ಪ್ರಕರಣದಲ್ಲಿ (Nyamathi SBI Bank Robbery) ಆರು ತಿಂಗಳ ಬಳಿಕ ಚಿನ್ನಾಭರಣ (Gold) ಸಹಿತ ಅರೋಪಿಗಳ ಬಂಧನವಾಗಿದೆ. ಪ್ರಮುಖ ಆರೋಪಿಗಳಾದ ತಮಿಳುನಾಡು ಮೂಲದ ಸಹೋದರರಾದ ಅಜಯ್ ಹಾಗೂ ವಿಜಯ್ ಸೇರಿದಂತೆ ಒಟ್ಟು ಆರು ಆರೋಪಿಗಳನ್ನು ಬಂಧಿಸಿ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಪೂರ್ವ ವಲಯ ಐಜಿಪಿ ಡಾ.B.R.ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ. 2024ರ ಅಕ್ಟೋಬರ್ 28ರಂದು ನ್ಯಾಮತಿ ಎಸ್‍ಬಿಐ ಬ್ಯಾಂಕ್‍ನಲ್ಲಿ 13 ಕೋಟಿ ರೂ. ಮೌಲ್ಯದ 17 ಕೆಜಿ 750 ಗ್ರಾಂ ಚಿನ್ನಾಭರಣ ಕದ್ದು ಪರಾರಿಯಾಗಿದ್ದರು. ಆರೋಪಿಗಳಿ ದರೋಡೆಗೆ ಮೊದಲು, ದರೋಡೆಯ ನಂತರ ದರೋಡೆಕೋರರು ಗಡಿ ಚೌಡಮ್ಮನ ಅಷ್ಟಧಿಗ್ಬಂಧನ ಪೂಜೆ ಮಾಡಿದ್ದರು. ಅಲ್ಲದೇ ದರೋಡೆಯ ಮಾಹಿತಿಯನ್ನು ಕುಟುಂಭಸ್ಥರ ಜೊತೆಯೂ ಹಂಚಿಕೊಂಡಿರಲಿಲ್ಲ. ಪೊಲೀಸರು ಆರೋಪಿಗಳನ್ನು ಟೆಕ್ನಿಕಲ್ ಎವಿಡೆನ್ಸ್ ಮೂಲಕ ಬಂಧಿಸಿದ್ದಾರೆ.
ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ವಿಜಯ್ ಕುಮಾರ್ ನ್ಯಾಮತಿಯಲ್ಲಿ ಬೇಕರಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದ. ಬ್ಯಾಂಕ್‍ನಲ್ಲಿ ಲೋನ್ ಪಡೆಯಲು ಎರಡು ಬಾರಿ ಅರ್ಜಿ ಹಾಕಿದ್ದ, ಈ ಅರ್ಜಿ ತಿರಸ್ಕಾರವಾಗಿತ್ತು. ಇದರಿಂದ ರೋಸಿ ಹೋಗಿದ್ದ. ಇದೇ ಕಾರಣಕ್ಕೆ ಬ್ಯಾಂಕ್ ದರೋಡೆಗೆ ಹಿಂದಿ ವೆಬ್ ಸೀರಿಸ್ ನೋಡಿ ದರೋಡೆಗೆ ಸಂಚು ರೂಪಿಸಿದ್ದ ಎಂದು ತಿಳಿದುಬಂದಿದೆ. ಇನ್ನು ಆರೋಪಿಗಳು ಮೊಬೈಲ್, ವಾಹನ ಬಳಸದೇ, ಯಾವ ಸಾಕ್ಷಿಯನ್ನೂ ಬಿಡದೆ ದರೋಡೆ ಮಾಡಿದ್ದರು. ದರೋಡೆ ಮಾಡಿದ 17 ಕೆಜಿ ಚಿನ್ನವನ್ನು ತಮಿಳುನಾಡಿನ ಮಧುರೈನಲ್ಲಿರುವ ತೋಟದ ಮನೆಯ ಪಾಳು ಬಿದ್ದ ಬಾವಿಯಲ್ಲಿ ಇಟ್ಟಿದ್ದರು.