ದ್ವಿತೀಯ ಪಿಯುಸಿ ಫಲಿತಾಂಶ ಯಾವಾಗ?* *ರಿಸಲ್ಟ್ ನೋಡೋದು ಹೇಗೆ?*

*ದ್ವಿತೀಯ ಪಿಯುಸಿ ಫಲಿತಾಂಶ ಯಾವಾಗ?*

*ರಿಸಲ್ಟ್ ನೋಡೋದು ಹೇಗೆ?*

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ (Second PU Exam) ಮೌಲ್ಯಮಾಪನ ಪ್ರಕ್ರಿಯೆ ಈ ವಾರ ಮುಕ್ತಾಯಗೊಳ್ಳಲಿದ್ದು, ಬಹುತೇಕ ಮುಂದಿನ ವಾರ ಫಲಿತಾಂಶ (Second PU Result) ಪ್ರಕಟವಾಗುವ ನಿರೀಕ್ಷೆ ಇದೆ. ಏಪ್ರಿಲ್ 11ರ ಒಳಗಾಗಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ (KSEAB) ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 1 ರಿಂದ 20 ರ ವರೆಗೆ ನಡೆದಿತ್ತು. ಸದ್ಯ ಮೌಲ್ಯಪಾಪನ ಪ್ರಕ್ರಿಯೆ ಚಾಲ್ತಿಯಲ್ಲಿದೆ.

ಕಳೆದ ವರ್ಷ ಸೆಕೆಂಡ್ ಪಿಯು ಫಲಿತಾಂಶವನ್ನು ಏಪ್ರಿಲ್ 10 ರಂದು ಬಿಡುಗಡೆ ಮಾಡಲಾಗಿತ್ತು. ಈ ವರ್ಷವೂ ಸರಿಸುಮಾರು ಅದೇ ಹೊತ್ತಿಗೆ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.

ದ್ವಿತೀಯ ಪಿಯು ಫಲಿತಾಂಶ ನೋಡುವುದು ಹೇಗೆ?
ದ್ವಿತೀಯ ಪಿಯು ಫಲಿತಾಂಶ ಘೋಷಣೆಯಾದ ಕೂಡಲೇ ಇಲಾಖೆಯ ಅಧಿಕೃತ ವೆಬ್​​ಸೈಟ್​​ನಲ್ಲಿಯೂ ಅಪ್​ಲೋಡ್ ಮಾಡಲಾಗುತ್ತದೆ. karresults.nic.in ಅಥವಾ kseab.karnataka.gov.in ವೆಬ್​ಸೈಟ್​​ಗಳಲ್ಲಿ ಫಲಿತಾಂಶ ನೋಡಬಹುದಾಗಿದೆ.

ಮಾರ್ಚ್ 1ರಿಂದ 20ರವರೆಗೆ ನಡೆದ ಪರೀಕ್ಷೆಗೆ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಒಟ್ಟು 1171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು, 18,317 ಖಾಸಗಿ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

*ದ್ವಿತೀಯ ಪಿಯು ಫಲಿತಾಂಶ ವೀಕ್ಷಿಸಲು ಹೀಗೆ ಮಾಡಿ*

ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಬೇಕು.
ಹೋಂ ಪೇಜ್​ನಲ್ಲಿ, Second PU Results 2025 ಲಿಂಕ್ ಅನ್ನು ಕ್ಲಿಕ್ ಮಾಡಿ.
ರಿಜಿಸ್ಟ್ರೇಷನ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪಾಸ್‌ವರ್ಡ್ ಆಯ್ಕೆಮಾಡಿ.
Second PU Results 2025 ಎಂಬುದು ಸ್ಕ್ರೀನ್​ನಲ್ಲಿ ಕಾಣಿಸುತ್ತದೆ.
ಈಗ ನೀವು ರಿಸಲ್ಟ್ ನೋಡಬಹುದು. ಅಲ್ಲಿಯೇ ಪಿಡಿಎಫ್ ಡೌನ್​ಲೋಡ್ ಮಾಡಲು ಅವಕಾಶ ಇರುತ್ತದೆ.