*ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯಲ್ಲಿ ಶಿವಮೊಗ್ಗದ ಪ್ರವಾಸಿಗ ಉದ್ಯಮಿ ಸಾವು* ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮಂಜುನಾಥ್
*ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯಲ್ಲಿ ಶಿವಮೊಗ್ಗದ ಪ್ರವಾಸಿಗ ಉದ್ಯಮಿ ಸಾವು*
ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮಂಜುನಾಥ್
ಜಮ್ಮು ಕಾಶ್ಮೀರದ ಪಹಲ್ಗಾಮ್‌ನ (Pahalgam Terror Attack) ಬೈಸರನ್ ಕಣಿವೆಯ ಮೇಲಿನ ಹುಲ್ಲುಗಾವಲುಗಳಲ್ಲಿ ಇಂದು ಗುಂಡಿನ ದಾಳಿ ನಡೆದಿದೆ.
ಈ ಪ್ರದೇಶವನ್ನು ಕಾಲ್ನಡಿಗೆಯಲ್ಲಿ ಅಥವಾ ಕುದುರೆಯ ಮೇಲೆ ಮಾತ್ರ ತಲುಪಲು ಸಾಧ್ಯ. ಉಗ್ರರು ಬಚ್ಚಿಟ್ಟುಕೊಂಡು ಗುಂಡು ಹಾರಿಸಿದ್ದಾರೆ. ಕಾಡುಗಳು, ಸ್ಫಟಿಕದಂತಹ ಸ್ಪಷ್ಟ ಸರೋವರಗಳು ಮತ್ತು ವಿಸ್ತಾರವಾದ ಹುಲ್ಲುಗಾವಲುಗಳಿಗೆ ಹೆಸರುವಾಸಿಯಾದ ಪಹಲ್ಗಾಮ್ ಜನಪ್ರಿಯ ಪ್ರವಾಸಿ ತಾಣವಾಗಿದೆ. ಈ ಪ್ರವಾಸಿ ತಾಣದಲ್ಲಿಯೇ ಉಗ್ರರಿಂದ ಗುಂಡಿನ ದಾಳಿ ನಡೆದಿದೆ.
ಭಯೋತ್ಪಾದಕರ ದಾಳಿಯಲ್ಲಿ ಶಿವಮೊಗ್ಗ ನಿವಾಸಿ ಸಾವನ್ನಪ್ಪಿದ್ದಾರೆ.
ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರಿಂದ ಕೃತ್ಯ ನಡೆದಿದೆ. ಉಗ್ರರ ದಾಳಿಗೆ ಬಲಿಯಾದ ಶಿವಮೊಗ್ಗದ ಮಂಜುನಾಥ್ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರು. ಅವರ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ.
ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉನ್ನತ ಮಟ್ಟದ ಭದ್ರತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅಲ್ಲಿ ಅವರು ಜಮ್ಮು ವಿಭಾಗದ ಮೇಲೆ ವಿಶೇಷ ಗಮನ ಹರಿಸಿ ಭಯೋತ್ಪಾದನೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಆದೇಶಗಳನ್ನು ನೀಡಿದ್ದರು ಎಂಬುದು ಗಮನಾರ್ಹ ಸಂಗತಿ.
ಪಹಲ್ಗಾಮ್‌ನ ಉಗ್ರರ ದಾಳಿಗೆ ಜಮ್ಮು ಕಾಶ್ಮೀರದ ಸಿಎಂ ಒಮರ್ ಅಬ್ದುಲ್ಲಾ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.
ಈ ಘಟನೆ ಕೇಳಿ ತೀವ್ರ ಆಘಾತವಾಗಿದೆ. ನಮ್ಮ ಪ್ರವಾಸಿಗರ ಮೇಲಿನ ದಾಳಿ ಅಮಾನವೀಯ. ಈ ದಾಳಿ ನಡೆಸಿದವರು ಮನುಷ್ಯರೇ ಅಲ್ಲ. ಮೃತರ ಕುಟುಂಬಕ್ಕೆ ನನ್ನ ಸಂತಾಪಗಳನ್ನು ಸೂಚಿಸುತ್ತಿದ್ದೇನೆ. ನನ್ನ ಸಂಪುಟದ ಸಚಿವರ ಜೊತೆ ಮಾತನಾಡಿದ್ದೇನೆ. ಅವರು ಈ ದಾಳಿಯಲ್ಲಿ ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಸೌಲಭ್ಯ ಒದಗಿಸುವುದಾಗಿ ತಿಳಿಸಿದ್ದಾರೆ ಎಂದಿದ್ದಾರೆ.