ಚಂಡ ಮಾರುತ- ತರಲಿದೆ ಶಿವಮೊಗ್ಗದಲ್ಲೂ ಇವತ್ತಿಂದ ಮಳೆ*

*ಚಂಡ ಮಾರುತ- ತರಲಿದೆ ಶಿವಮೊಗ್ಗದಲ್ಲೂ ಇವತ್ತಿಂದ ಮಳೆ*

ಚಂಡಮಾರುತ ಪರಿಣಾಮ ಇಂದಿನಿಂದ ಕರ್ನಾಟಕದಾದ್ಯಂತ ಮಳೆ(Rain)ಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದರೂ ಮಳೆಯ ಮುನ್ಸೂಚನೆ ನೀಡಿಲ್ಲ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ರಬಕವಿ, ಸಿಂಧನೂರು, ಚಿಂಚೋಳಿ, ಹಿರಿಯೂರು, ಬೆಳಗಾವಿ, ಜೇವರಗಿ, ಬಾದಾಮಿ, ಹುಬ್ಬಳ್ಳಿ, ಕಲಘಟಗಿ, ಮಸ್ಕಿ, ಕಿಬ್ಬನಹಳ್ಳಿ, ತಾಳಿಕೋಟೆ, ಖಜೂರಿ, ನರಗುಂದ, ಕೆಂಭಾವಿ, ಜಾಲಹಳ್ಳಿ, ಹುನಗುಂದ, ಇಳಕಲ್, ರಾಯ್​ಭಾಗ್, ಚಿತ್ರದುರ್ಗ, ಸಿದ್ದಾಪುರ, ಬೈಲಹೊಂಗಲ, ಮುದಗಲ್, ಕುಷ್ಟಗಿ, ಚಿತ್ತಾಪುರ, ಅಣ್ಣಿಗೆರೆ, ಆಲಮಟ್ಟಿ, ಶಿವಮೊಗ್ಗ, ಜಯಪುರ, ಕಳಸ, ತ್ಯಾಗರ್ತಿ, ಕಮ್ಮರಡಿ, ಶೃಂಗೇರಿ, ಗುಬ್ಬಿಯಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 41.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ34.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ. 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 40.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 39.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 37.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 41.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 36.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.