ಕರ್ನಾಟಕ SSLC ಫಲಿತಾಂಶ ಪ್ರಕಟ* *ಯಾವ ಜಿಲ್ಲೆಗೆ ಯಾವ ಸ್ಥಾನ?* *ಶಿವಮೊಗ್ಗ ಜಿಲ್ಲೆಗೆ 4ನೇ ಸ್ಥಾನ(ಶೇ.82.21)* *144 ಶಾಲೆಗಳಲ್ಲಿ ಶೂನ್ಯ ಫಲಿತಾಂಶ* *ಉತ್ತರ ಪತ್ರಿಕೆ ಸ್ಕ್ಯಾನ್ ಪಡೆಯಲು ಮೇ.7 ರ ವರೆಗೆ ಅವಕಾಶ* *kseab.karnataka.gov.in ನಲ್ಲಿ ರಿಸಲ್ಟ್*
*ಕರ್ನಾಟಕ SSLC ಫಲಿತಾಂಶ ಪ್ರಕಟ*
*ಯಾವ ಜಿಲ್ಲೆಗೆ ಯಾವ ಸ್ಥಾನ?*
*ಶಿವಮೊಗ್ಗ ಜಿಲ್ಲೆಗೆ 4ನೇ ಸ್ಥಾನ(ಶೇ.82.21)*
*144 ಶಾಲೆಗಳಲ್ಲಿ ಶೂನ್ಯ ಫಲಿತಾಂಶ*
*ಉತ್ತರ ಪತ್ರಿಕೆ ಸ್ಕ್ಯಾನ್ ಪಡೆಯಲು ಮೇ.7 ರ ವರೆಗೆ ಅವಕಾಶ*
*kseab.karnataka.gov.in ನಲ್ಲಿ ರಿಸಲ್ಟ್*
2024-2025ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1 ಫಲಿತಾಂಶ (SSLC Result) ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಈ ಬಾರಿ ಶೇ.66.14ರಷ್ಟು ಅಂದರೆ ಕಳೆದ ವರ್ಷಕ್ಕಿಂತ 8% ಫಲಿತಾಂಶ ಹೆಚ್ಚಾಗಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. 74% ಹೆಣ್ಣುಮಕ್ಕಳು ಮತ್ತು 58.07% ಗಂಡು ಮಕ್ಕಳು ಉತ್ತೀರ್ಣ ಆಗಿದ್ದಾರೆ ಎಂದು ಹೇಳಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಶೇಕಡಾ 62.7ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಅನುದಾನಿತ ಶಾಲೆಗಳಲ್ಲಿ ಶೇಕಡಾ 58.97ರಷ್ಟು, ಅನುದಾನರಹಿತ ಶಾಲೆಗಳಲ್ಲಿ ಶೇ.75.59ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ ಆಗಿದ್ದಾರೆ. ನಗರ ಪ್ರದೇಶದ ಶೇಕಡಾ 67.05ರಷ್ಟು ಮತ್ತು ಗ್ರಾಮೀಣ ಭಾಗದಲ್ಲಿ ಶೇಕಡಾ 65.47ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ ಆಗಿದ್ದಾರೆ. ಈ ಬಾರಿ 22 ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕ ಪಡೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಕಳೆದ ವರ್ಷ ಸ್ವಲ್ಪ ಗೊಂದಲ ಇತ್ತು. ಪರೀಕ್ಷೆಯ ಪಾವಿತ್ರತ್ಯೆ ಕಾಪಾಡಬೇಕು ಅಂತ ವೆಬ್ ಕಾಸ್ಟಿಂಗ್ ಮಾಡಿದ್ದೇವೆ. ಕಳೆದ ವರ್ಷ 53% ಫಲಿತಾಂಶ ಬಂದಿತ್ತು. ನಾವು ಗ್ರೇಸ್ ಮಾರ್ಕ್ಸ್ ಕೊಟ್ಟ ಮೇಲೆ 73% ಗೆ ಬಂತು. ಸಿಎಂ ಸಿದ್ದರಾಮಯ್ಯ ಕೂಡ ಇದರ ಬಗ್ಗೆ ಮಾತನಾಡಿದ್ದರು. ಆದಾದ ಮೇಲೆ ಟಾರ್ಗೆಟ್ ಕೊಟ್ಟರು. ಇಲಾಖೆಯಿಂದ ಒಳ್ಳೆಯ ರಿಸಲ್ಟ್ ಬರುವ ರೀತಿಯಲ್ಲಿ ಮಾಡುವಂತೆ ಹೇಳಿದ್ದರು ಎಂದರು.
*ಯಾವ ಜಿಲ್ಲೆಗೆ ಯಾವ ಸ್ಥಾನ?*
ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ (ಶೇ.91.12), ಉಡುಪಿ ಜಿಲ್ಲೆ 2ನೇ ಸ್ಥಾನ (ಶೇ.89.96), ಉತ್ತರ ಕನ್ನಡ ಜಿಲ್ಲೆಗೆ 3ನೇ ಸ್ಥಾನ (ಶೇ.83.19), ಶಿವಮೊಗ್ಗ ಜಿಲ್ಲೆಗೆ 4ನೇ ಸ್ಥಾನ (ಶೇ.82.29), ಕೊಡಗು ಜಿಲ್ಲೆಗೆ 5ನೇ ಸ್ಥಾನ (ಶೇ.82.21), ಕಲಬುರಗಿ ಕೊನೆಯ ಸ್ಥಾನ (ಶೇ42.43) ಪಡೆದುಕೊಂಡಿದೆ.
*144 ಶಾಲೆಗಳಲ್ಲಿ ಶೂನ್ಯ ಫಲಿತಾಂಶ*
ಸರ್ಕಾರಿಯ ಆರು, ಅನುದಾನಿತ 30 ಮತ್ತು ಅನುದಾನ ರಹಿತ 108 ಶಾಲೆಗಳು ಸೇರಿದಂತೆ ಒಟ್ಟು 144 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.
*ಉತ್ತರ ಪತ್ರಿಕೆ ಸ್ಕ್ಯಾನ್ ಪ್ರತಿ ಪಡೆಯಲು ಅವಕಾಶ*
ಇನ್ನು ಇಂದಿನಿಂದಲೇ ಮೇ-7 ರವರೆಗೆ ಉತ್ತರ ಪತ್ರಿಕೆ ಸ್ಕ್ಯಾನ್ ಪ್ರತಿ ಪಡೆಯಲು ಅವಕಾಶ ನೀಡಲಾಗಿದೆ. ಮೇ 4 ರಿಂದ 11ನೇ ತಾರೀಖಿನವರೆಗೂ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಎಸ್ಎಸ್ಎಲ್ಸಿ ಪರೀಕ್ಷೆ-2 ಮೇ 26 ರಿಂದ ಜೂನ್ 2ರವರೆಗೆ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆ-3 ಜೂನ್ 23 ರಿಂದ 30 ರವರೆಗೆ ನಡೆಯಲಿದೆ.