ದೇಶದ್ರೋಹಿ ವ್ಯಕ್ತಿಯನ್ನು ಬಂಧಿಸಿ ಎಂದು ಕೋಟೆ ಪೊಲೀಸ್ ಠಾಣೆಗೆ ಹೋದ ಶಾಸಕ ಚನ್ನಿ*
*ದೇಶದ್ರೋಹಿ ವ್ಯಕ್ತಿಯನ್ನು ಬಂಧಿಸಿ ಎಂದು ಕೋಟೆ ಪೊಲೀಸ್ ಠಾಣೆಗೆ ಹೋದ ಶಾಸಕ ಚನ್ನಿ*

ಇಂದು ಬೆಳಗ್ಗೆ ಬಿಜೆಪಿ ಶಿವಮೊಗ್ಗ ನಗರ ಸಮಿತಿಯ ಸದಸ್ಯರು ಹಾಗೂ ಕಾರ್ಯಕರ್ತರೊಂದಿಗೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ನಗರದ ಕೋಟೆ ಪೊಲೀಸ್ ಠಾಣೆಗೆ ಭೇಟಿ ನೀಡಿ, ದೇಶದ್ರೋಹಿ ಚಟುವಟಿಕೆಯಲ್ಲಿ ಭಾಗಿಯಾಗಿರುವ ವ್ಯಕ್ತಿಯನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿದರು.
ಈ ರೀತಿಯ ಚಟುವಟಿಕೆಗಳು ರಾಷ್ಟ್ರದ ಏಕತೆಯನ್ನು ಅಶಾಂತಿಗೆ ಕಾರಣವಾಗುವುದು ಮಾತ್ರವಲ್ಲದೆ, ಸಾರ್ವಜನಿಕ ಭದ್ರತೆ ಮತ್ತು ಭಾವನೆಗಳ ವಿರುದ್ಧದ ಕೃತ್ಯವಾಗಿವೆ. ಇಂತಹ ದೇಶ ವಿರೋಧಿ ಚಟುವಟಿಕೆಗಳನ್ನು ಯಾವುದೇ ರೀತಿಯಿಂದಲೂ ಕ್ಷಮಿಸಲು ಸಾಧ್ಯವಿಲ್ಲ ಎಂದು ತಿಳಿಸಿ, ಸಂಬಂಧಿತ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಆರೋಪಿಯನ್ನು ಶೀಘ್ರ ಬಂಧಿಸಿ ಕಾನೂನು ಕ್ರಮ ಕೈಕೈಗೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಕೋಷ್ಟಾಗಳ ಸಂಯೋಜಕರಾದ ದತ್ತಾತ್ರೇಯ, ಬಿಜೆಪಿ ನಗರ ಅಧ್ಯಕ್ಷರಾದ ಮೋಹನ್ ರೆಡ್ಡಿ, ಪ್ರಧಾನ ಕಾರ್ಯದರ್ಶಿಗಳಾದ ದೀನ ದಯಾಳು ಸೇರಿದಂತೆ ಬಿಜೆಪಿ ನಗರದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.