ರಾಷ್ಟ್ರೀಯ ಸೇವಾ ಯೋಜನೆಯಿಂದ ಬದುಕುವ ಕಲೆ, ಆತ್ಮವಿಶ್ವಾಸ, ಮಾನವೀಯ ಮೌಲ್ಯಗಳು ವೃದ್ಧಿ; ಎಸ್.ಪಿ.ದಿನೇಶ್

*ರಾಷ್ಟ್ರೀಯ ಸೇವಾ ಯೋಜನೆಯಿಂದ ಬದುಕುವ ಕಲೆ, ಆತ್ಮವಿಶ್ವಾಸ, ಮಾನವೀಯ ಮೌಲ್ಯಗಳು ವೃದ್ಧಿ; ಎಸ್.ಪಿ.ದಿನೇಶ್ *

ಶಿವಮೊಗ್ಗ : ಮಾನವೀಯ ಮೌಲ್ಯದ ಜೊತೆಗೆ ಬದುಕಿನ ಕಲೆ ಹಾಗೂ ಆತ್ಮವಿಶ್ವಾಸವನ್ನು ರಾಷ್ಟ್ರೀಯ ಸೇವಾ ಯೋಜನೆ ವೃದ್ಧಿಸುತ್ತದೆ. ವಿದ್ಯಾಭ್ಯಾಸದ ಜೊತೆಗೆ ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳು ವಿದ್ಯಾರ್ಥಿಗಳ ಬಾಳಿನಲ್ಲಿ ಬೆಳಕನ್ನು ಚೆಲ್ಲುತ್ತವೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಎಸ್.ಪಿ.ದಿನೇಶ್ ಹೇಳಿದರು.

ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು, ಐ.ಕ್ಯೂ.ಎ.ಸಿ. ದೈಹಿಕ ಶಿಕ್ಷಣ ವಿಭಾಗ, ಎನ್ ಎಸ್ ಎಸ್, ಎನ್ ಸಿ ಸಿ, ರೋವರ್ ರೇಂಜರ್ಸ್ ಎಲ್ಲಾ ವಿಭಾಗಗಳ ಸಮಾರೋಪ ಸಮಾರಂಭದಲ್ಲಿ ಹಾಗೂ ಎನ್ ಎಸ್ ಎಸ್ ಹಿರಿಯ ಸ್ವಯಂಸೇವಕರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಪ್ರತಿಯೊಬ್ಬ ವಿದ್ಯಾರ್ಥಿಗಳು ಸಹ ತಮ್ಮ ಓದಿನ ಜೊತೆಗೆ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕಾಲೇಜಿನ ಅನುಭವಗಳನ್ನು ಹಂಚಿಕೊಂಡರು.

ಇದೇ ಸಂದರ್ಭದಲ್ಲಿ ಸಂದರ್ಭದಲ್ಲಿ ಸಹ್ಯಾದ್ರಿ ವಾಣಿಜ್ಯ ಕಾಲೇಜಿನ ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ. ಗಿರಿಧರ್.ಕೆ.ವಿ ಮಾತನಾಡಿ, ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಎ.ಟಿ.ಎನ್.ಸಿ ಕಾಲೇಜ್ ಎನ್ಎಸ್ಎಸ್ ವಿಭಾಗದಲ್ಲಿ ಅತ್ಯಂತ ಹೆಚ್ಚು ಕೆಲಸಗಳನ್ನು ಮಾಡುವುದರ ಮುಖಾಂತರ ಹಲವಾರು ಪ್ರಶಸ್ತಿಗಳಿಗೆ ಭಾಜನವಾಗಿದೆ ಎಂದು ನುಡಿದರು.

ಈ ವೇಳೆ ಕುವೆಂಪು ವಿಶ್ವವಿದ್ಯಾನಿಲಯದ ವಿಶ್ರಾಂತ ದೈಹಿಕ ನಿರ್ದೇಶಕರಾದ ಪ್ರೊ. ಜಿ.ಎಸ್.ನಾಗರಾಜ ಅವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿಯ ಟಿ.ಆರ್.ಅಶ್ವಥ್ ನಾರಾಯಣ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಗೆ ಎನ್ಎಸ್ಎಸ್ ಹಾಗೂ ರೆಡ್ ಕ್ರಾಸ್ ತುಂಬಾ ಸಹಕಾರಿಯಾಗಿದೆ. ಹಾಗೂ ನಮ್ಮ ರಾಷ್ಟ್ರೀಯ ಶಿಕ್ಷಣ ಸಮಿತಿ ರಾಜ್ಯದಲ್ಲಿ ಒಂದು ಮಾದರಿ ವಿದ್ಯಾಸಂಸ್ಥೆಯಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು ಪ್ರಾಂಶುಪಾಲರಾದ ಪ್ರೊ. ಮಮತಾ.ಪಿ.ಆರ್ ಅವರು, ಪ್ರೊ. ನಾಗರಾಜ್ ಅವರು 30 ವರ್ಷಗಳಿಂದ ನಿರಂತರವಾಗಿ ರಾಷ್ಟ್ರೀಯ ಸೇವಾ ಯೋಜನೆಗಳಲ್ಲಿ ಪ್ರಾಮಾಣಿಕವಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಾ ಬಂದಿದ್ದು, ನಮ್ಮ ಕಾಲೇಜಿಗೆ ಅನೇಕ ಪ್ರಶಸ್ತಿಗಳೊಂದಿಗೆ ಕೀರ್ತಿಯನ್ನು ತಂದಿದ್ದಾರೆ ಎಂದು ಅಭಿನಂದಿಸಿದರು.

ವೇದಿಕೆಯಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷರಾದ ಜಿ.ವಿಜಯಕುಮಾರ್, ಎನ್ ಎಸ್ ಎಸ್ ಅಧಿಕಾರಿ ಕೆ.ಎಂ.ನಾಗರಾಜ್, ಮಂಜುನಾಥ್.ಎನ್, ನವೀನ್, ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.