ಸಂಕಷ್ಟಕ್ಕೆ ಸಿಲುಕಿದ್ದ ಸೋನು ನಿಗಮ್‌ಗೆ ಕರ್ನಾಟಕ ಹೈಕೋರ್ಟ್ ನಿಂದ ರಿಲೀಫ್* ಗಾಯಕ ಸೋನು ನಿಗಮ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್  ಪೊಲೀಸರಿಗೆ ನಿರ್ದೇಶನ

*ಸಂಕಷ್ಟಕ್ಕೆ ಸಿಲುಕಿದ್ದ ಸೋನು ನಿಗಮ್‌ಗೆ ಕರ್ನಾಟಕ ಹೈಕೋರ್ಟ್ ನಿಂದ ರಿಲೀಫ್*

ಗಾಯಕ ಸೋನು ನಿಗಮ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್  ಪೊಲೀಸರಿಗೆ ನಿರ್ದೇಶನ

ಕನ್ನಡಿಗರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಗಾಯಕ ಸೋನು ನಿಗಮ್ ಕಳೆದ ಕೆಲ ದಿನಗಳಿಂದ ಭಾರಿ ಸಂಕಷ್ಟಕ್ಕೆ ಸಿಲುಕಿದ್ದರು. ಕನ್ನಡ ಸಿನಿಮಾಗಳಿಂದ ಬ್ಯಾನ್, ಕರ್ನಾಟಕದಲ್ಲಿ ವೇದಿಕೆಗಳು ಬ್ಯಾನ್ ಸೇರಿದಂತೆ ಹಲವು ನಿರ್ಧಾರಗಳ ಬೆನ್ನಲ್ಲೇ ಸೋನು ನಿಗಮ್ ಕನ್ನಡಿಗರಲ್ಲಿ ಕ್ಷಮೆ ಕೇಳಿದ್ದರು.

ಆದರೆ ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಆತಂಕದಲ್ಲಿದ್ದ ಸೋನು ನಿಗಮ್‌ಗೆ ಕರ್ನಾಟಕ ಹೈಕೋರ್ಟ್ ರಿಲೀಫ್ ನೀಡಿದೆ.

ಗಾಯಕ ಸೋನು ನಿಗಮ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ಗುರುವಾರ ಪೊಲೀಸರಿಗೆ ನಿರ್ದೇಶನ ನೀಡಿದೆ.

ಮುಂದಿನ ವಿಚಾರಣೆಯವರೆಗೂ ಈ ಆದೇಶ ಜಾರಿಯಲ್ಲಿರುತ್ತದೆ ಎಂದಿದೆ.

*ಸೋನು ನಿಗಮ್ ಖುದ್ದಾಗಿ ಹಾಜರಾಗಬೇಕಿಲ್ಲ*

ಈ ಹಂತದಲ್ಲಿ ಸೋನು ನಿಗಮ್ ಅವರು ಹೇಳಿಕೆ ನೀಡಲು ಖುದ್ದಾಗಿ ಹಾಜರಾಗಬೇಕಾಗಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣನವರ್ ಅವರು ನಿಗಮ್ ಅವರ ಮೇಲಿನ ಪ್ರಕರಣವನ್ನು ರದ್ದುಗೊಳಿಸುವಂತೆ ಅರ್ಜಿ ವಿಚಾರಣೆ ನಡೆಸಿ ಮಧ್ಯಂತರ ಆದೇಶ ನೀಡಿದರು. ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ನಿಗಮ್ ವಿರುದ್ಧ ಪ್ರಕರಣ ದಾಖಲಾಗಿತ್ತು. ತನಿಖೆಗೆ ಸಹಕರಿಸಿದರೆ ಗಾಯಕನ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳುವುದಿಲ್ಲ ಎಂದು ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.