ಅತಿಥಿ ಶಿಕ್ಷಕರ ಮತ್ತು ಉಪನ್ಯಾಸಕರ ವೇತನ ಹೆಚ್ಚಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರಿಗೆ ಅಭಿನಂದನೆ ಸಲ್ಲಿಸಿದ ಕೆ ಪಿ ಸಿ ಸಿ ಸದಸ್ಯ ವೈ.ಹೆಚ್. ನಾಗರಾಜ್
ಅತಿಥಿ ಶಿಕ್ಷಕರ ಮತ್ತು ಉಪನ್ಯಾಸಕರ ವೇತನ ಹೆಚ್ಚಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರಿಗೆ ಅಭಿನಂದನೆ ಸಲ್ಲಿಸಿದ ಕೆ ಪಿ ಸಿ ಸಿ ಸದಸ್ಯ ವೈ.ಹೆಚ್. ನಾಗರಾಜ್
ಶಿವಮೊಗ್ಗ: ಅತಿಥಿ ಶಿಕ್ಷಕರ ಮತ್ತು ಉಪನ್ಯಾಸಕರ ವೇತನವನ್ನು ಹೆಚ್ಚಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು ಎಂದು ಕೆ ಪಿ ಸಿ ಸಿ ಸದಸ್ಯ ವೈ.ಹೆಚ್. ನಾಗರಾಜ್ ತಿಳಿಸಿದ್ದಾರೆ.
ಸರ್ಕಾರ ಅತಿಥಿ ಶಿಕ್ಷಕರ ವೇತನವನ್ನು ಎರಡು ಸಾವಿರ ರೂ.ಗಳಿಗೆ ಹೆಚ್ಚಿಸಿದೆ. ಇದರಿಂದ ಶಿಕ್ಷಕರಿಗೆ ಅನುಕೂಲವಾಗಲಿದೆ. ಹಾಗೆಯೇ ಗ್ಯಾರಂಟಿ ಯೋಜನೆಗಳು ಕೂಡ ತಲುಪುತ್ತಿವೆ. ಇದಕ್ಕಾಗಿ ಸರ್ಕಾರಕ್ಕೆ ಕೃತಜ್ಞತೆಗಳು ಎಂದಿದ್ದಾರೆ.
ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಶಿವಮೊಗ್ಗಕ್ಕೆ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಉದ್ಘಾಟನೆಗೆ ಆಗಮಿಸುತ್ತಿದ್ದು, ಈ ಕ್ರೀಡಾಕೂಟ ಯಶಸ್ವಿಯಾಗಲಿ. ಹಾಗೆಯೇ ಮುಖ್ಯಮಂತ್ರಿಗಳು ಶಿವಮೊಗ್ಗದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಿ ಎಂದು ಮನವಿ ಮಾಡಿದ್ದಾರೆ.