ಮೇ 20 ರಂದು ಹೊಸಪೇಟೆಯಲ್ಲಿ ರಾಜ್ಯ ಸರ್ಕಾರದ 2ನೇ ವರ್ಷದ ಸಾಧನೆ ಸಮಾವೇಶ”* 1 ಲಕ್ಷ ಹಕ್ಕುಪತ್ರ ವಿತರಣೆ ಜೊತೆಗೆ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮ

 ಮೇ 20 ರಂದು ಹೊಸಪೇಟೆಯಲ್ಲಿ ರಾಜ್ಯ ಸರ್ಕಾರದ 2ನೇ ವರ್ಷದ ಸಾಧನೆ ಸಮಾವೇಶ”*

1 ಲಕ್ಷ ಹಕ್ಕುಪತ್ರ ವಿತರಣೆ ಜೊತೆಗೆ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮ

ರಾಜ್ಯ ಸರ್ಕಾರ ಯಶಸ್ವಿಯಾಗಿ ಎರಡು ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 20 ರಂದು ಹೊಸಪೇಟೆಯಲ್ಲಿ ನಡೆಯಲಿರುವ 2ನೇ ವರ್ಷದ ಸಾಧನೆ ಸಮಾವೇಶ ಹಾಗೂ 1 ಲಕ್ಷ ಹಕ್ಕುಪತ್ರ ವಿತರಣೆ ಜೊತೆಗೆ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮ ಕುರಿತಂತೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಎ.ಪಿ.ಎಂ.ಸಿ ಸಭಾಂಗಣದಲ್ಲಿ ಸಚಿವ ಮಧು ಬಂಗಾರಪ್ಪರವರ ಉಪಸ್ಥಿತಿಯಲ್ಲಿ ಸಮಾವೇಶದ ಪೂರ್ವಭಾವಿ ಸಭೆ ನಡೆಸಲಾಯಿತು.

ಸಭೆಯಲ್ಲಿ ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಂಡು ಸಮಾವೇಶದ ಯಶಸ್ಸಿಗೆ ಅಗತ್ಯವಿರುವ ಸಿದ್ಧತೆಗಳ ಬಗ್ಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರವು 2ವರ್ಷಗಳಲ್ಲಿ ಮಾಡಿರುವ ಮಹತ್ತರ ಸಾಧನೆಗಳನ್ನು ಹಂಚಿಕೊಳ್ಳುವುದು, ಜನಸಂಪರ್ಕ ಹೆಚ್ಚಿಸುವುದು ಮತ್ತು ಸಾರ್ವಜನಿಕರೊಂದಿಗೆ ನೇರ ಸಂಪರ್ಕ ಹೊಂದುವುದು ಪ್ರಮುಖ ಉದ್ದೇಶವಾಗಿದೆ.ಸಭೆಯಲ್ಲಿ ಶಾಸಕರಾದ  ಸಿ.ಎಸ್. ನಾಡಗೌಡ, ಗ್ಯಾರೆಂಟಿ ಸಮಿತಿ ಅಧ್ಯಕ್ಷರಾದ ಶಿವಶಂಕರ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ  ಗುರು ತಾರನಾಳ, ಪುರಸಭೆ ಅಧ್ಯಕ್ಷರಾದ  ಮಹಿಬೂಬ ಗೊಳಸಂಗಿ, ಸಿ.ಬಿ ಆಸ್ಕಿ ಸೇರಿದಂತೆ ಪಕ್ಷದ ಕಾರ್ಯಕರ್ತರು, ಮಹಿಳಾ ಮುಖಂಡರುಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು