ಮೇ.20 ರಂದು ಹೊಸಪೇಟೆಯಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶ* *ಸಾಧನಾ ಸಮಾವೇಶಕ್ಕೆ ಬನ್ನಿ ಎಂದು ಕಾರ್ಯಕರ್ತರಿಗೆ ಆಹ್ವಾನಿಸಿದ ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್ ಉತ್ತರ ಬ್ಲಾಕ್ ಅಧ್ಯಕ್ಷ ಶಿವಕುಮಾರ್, ದಕ್ಷಣ ಬ್ಲಾಕ್ ಅಧ್ಯಕ್ಷ ಕಲೀಂ ಪಾಷರಿಂದಲೂ ಆಹ್ವಾನ
*ಮೇ.20 ರಂದು ಹೊಸಪೇಟೆಯಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶ*
*ಸಾಧನಾ ಸಮಾವೇಶಕ್ಕೆ ಬನ್ನಿ ಎಂದು ಕಾರ್ಯಕರ್ತರಿಗೆ ಆಹ್ವಾನಿಸಿದ ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್
ಉತ್ತರ ಬ್ಲಾಕ್ ಅಧ್ಯಕ್ಷ ಶಿವಕುಮಾರ್, ದಕ್ಷಣ ಬ್ಲಾಕ್ ಅಧ್ಯಕ್ಷ ಕಲೀಂ ಪಾಷರಿಂದಲೂ ಆಹ್ವಾನ
ಕಾಂಗ್ರೆಸ್ ಸರ್ಕಾರದ ಸಾಧನೆಗಳ ಸಮರ್ಪಣಾ ಸಂಕಲ್ಪ ಸಮಾವೇಶ ಇದೇ 20 ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ಹೊಸಪೇಟೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಈ ಸಮಾರಂಭದಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ* , ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಮುಖ್ಯಮಂತ್ರಿಗಳದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳು ಹಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಶಿವಮೊಗ್ಗ ಜಿಲ್ಲಾ ಉಸ್ತುವರಿ ಸಚಿವರಾದ ಮಧು ಬಂಗಾರಪ್ಪನವರು ಭಾಗವಹಿಸಲಿದ್ದಾರೆ.
ಜಿಲ್ಲೆಯ ಶಾಸಕರು, ಮಾಜಿ ಶಾಸಕರು, 2023 ರ ಅಭ್ಯರ್ಥಿಗಳು, ಕೆಪಿಸಿಸಿ ಪದಾಧಿಕಾರಿಗಳು, ವಿವಿಧ ನಿಗಮ ಮಂಡಳಿ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮುಂಚೂಣಿ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಗವಾಹಿಸಬೇಕಾಗಿ ವಿನಂತಿಸಿದ್ದಾರೆ.