ಕರ್ನಾಟಕದಲ್ಲಿ ಮುಂದಿನ ಐದಾರು ದಿನ ಭಾರೀ ಮಳೆ* *ಮೇ 22-24ರವರೆಗೆ ಕೊಂಕಣ ಮತ್ತು ಗೋವಾದಲ್ಲೂ ಅತಿ ಹೆಚ್ಚು ಮಳೆ*

*ಕರ್ನಾಟಕದಲ್ಲಿ ಮುಂದಿನ ಐದಾರು ದಿನ ಭಾರೀ ಮಳೆ*

*ಮೇ 22-24ರವರೆಗೆ ಕೊಂಕಣ ಮತ್ತು ಗೋವಾದಲ್ಲೂ ಅತಿ ಹೆಚ್ಚು ಮಳೆ*

ಕರ್ನಾಟಕದಲ್ಲಿ (Karnataka) ಪೂರ್ವ ಮುಂಗಾರು ಮಳೆ ಭರ್ಜರಿಯಾಗಿದ್ದು, ವರುಣನ ಜನ ತತ್ತರಿಸಿದ್ದಾರೆ. ಅದರಲ್ಲೂ ಮುಖ್ಯವಾಗಿ ಬೆಂಗಳೂರಿನಲ್ಲಿ (Bengaluru) ಭಾನುವಾರ ಸುರಿದ ಒಂದೇ ಒಂದು ಮಳೆ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಸದ್ಯ ಎರಡು ದಿನದಿಂದ ಮಳೆರಾಯ ಬಿಡುವು ನೀಡಿದ್ದಾನೆ ಎನ್ನುವಷ್ಟರಲ್ಲಿ ಹವಾಮಾನ ಇಲಾಖೆ ಮತ್ತೆ ಮಳೆ ಎಚ್ಚರಿ ಕೊಟ್ಟಿದ್ದು, ರಾಜ್ಯದಲ್ಲಿ ಮುಂದಿನ ಐದಾರು ದಿನಗಳ ಕಾಲ ಮಳೆಯಾಗಲಿದೆ ಎಂದು ಮುನ್ಸೂಚನೆ (rainfall forecast )ನೀಡಿದೆ.

ರಾಜ್ಯದಲ್ಲಿ ಮುಂದಿನ ಐದಾರು ದಿನಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇಂದಿನಿಂದ ಮೇ 28ರ ತನಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಮೇತ ಮಳೆಯಾಗಲಿದೆ ಎಂದು ತಿಳಿಸಿದೆ. ಇನ್ನು ಬೆಂಗಳೂರಿನಲ್ಲಿ ಮಳೆ ಪ್ರಮಾಣ ಕಡಿಮೆ ಇದ್ದು, ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ, ಮಲೆನಾಡಿನಲ್ಲಿ ಭಾರಿ ಮಳೆಯಾಗೋ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಇಂದಿನಿಂದ ಮೆ.26ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮೇ 22-24ರವರೆಗೆ ಕೊಂಕಣ ಮತ್ತು ಗೋವಾದಲ್ಲಿ ಮತ್ತು ಮೇ 24 ರಂದು ಕರಾವಳಿ ಕರ್ನಾಟಕದಾದ್ಯಂತ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಮೇ 28 ರವರೆಗೆ ಕೇರಳ ಮತ್ತು ಕರ್ನಾಟಕದಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ದಕ್ಷಿಣ ಪರ್ಯಾಯ ದ್ವೀಪದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ (ಗಂಟೆಗೆ 40-50 ಕಿಲೋಮೀಟರ್) ಇರುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ.