ಮೇ.25 ರಂದು ಆಗಮಿಸುತ್ತಿದ್ದಾರೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾ ರೆಡ್ಡಿ*
*ಮೇ.25 ರಂದು ಆಗಮಿಸುತ್ತಿದ್ದಾರೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾ ರೆಡ್ಡಿ*
ಮೇ 25ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಹಿಳಾ ಘಟಕದ ಅಧ್ಯಕ್ಷರು ಹಾಗು ಮಾಜಿ ಶಾಸಕರಾದ *ಕುಮಾರಿ ಸೌಮ್ಯ ರೆಡ್ಡಿ* ಅವರು ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಹಿಳಾ ಕಾಂಗ್ರೆಸ್ ಹಾಗೂ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ *ಮಧು ಬಂಗಾರಪ್ಪ* ಉಪಸ್ಥಿತರಿರುವರು. ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ *ಅರ್.ಪ್ರಸನ್ನ *ಕುಮಾರ್* ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಸಭೆಯಲ್ಲಿ ಜಿಲ್ಲೆಯ ಶಾಸಕರಾದ ಬಿ.ಕೆ ಸಂಗಮೇಶ್ವರ, ಬೇಳೂರು ಗೋಪಾಲಕೃಷ್ಣ ,ಶ್ರೀಮತಿ ಬಲ್ಕಿಶ್ ಬಾನುರವರು ಉಪಸ್ಥಿತರಿರುವರು, 2023ರ ಕಾಂಗ್ರೆಸ್ ಅಭ್ಯರ್ಥಿಗಳು, ಕೆಪಿಸಿಸಿಯ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ಸಿನ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮುಂಚೂಣಿ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ವಿವಿಧ ನಿಗಮ ಮಂಡಳಿಯ ಅಧ್ಯಕ್ಷರು , ಮಹಿಳಾ ಕಾರ್ಯಕರ್ತರು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಕಾಂಗ್ರೆಸ್ ಉಸ್ತುವಾರಿ ಎಸ್.ಟಿ.ಹಾಲಪ್ಪ ತಿಳಿಸಿದ್ದಾರೆ.