ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*

*ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*

ಶಿವಮೊಗ್ಗ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಶೇಕಡಾ 90ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಪ್ರತಿಭಾನ್ವಿತ ಸರ್ಕಾರಿ ನೌಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುವ ಸಲುವಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಸರ್ಕಾರಿ ನೌಕರರ ಮಕ್ಕಳು ದಿನಾಂಕ: 31-05-2025 ರೊಳಗಾಗಿ ಆನ್ ಲೈನ್ https://ksgeanews.blogspot.com/2025/05/sslc-puc-2025.html ಮೂಲಕ ಅರ್ಜಿ ಸಲ್ಲಿಸುವಂತೆ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ ಕುಮಾರ್ ರವರು ಕೋರಿರುತ್ತಾರೆ.
*ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು* : ವಿದ್ಯಾರ್ಥಿಯು 2025ರ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು. ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು. ನಿಗಮ/ ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ.
*ಆನ್‌ಲೈನ್ ಅರ್ಜಿ ಸಲ್ಲಿಸುವಾಗ ಗಮನಿಸಬೇಕಾದ ಅಂಶಗಳು:* ವಿದ್ಯಾರ್ಥಿಯ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ,ದೃಢೀಕೃತ ಅಂಕಪಟ್ಟಿ, ಇಲಾಖೆಯ ಸೇವಾ ದೃಢೀಕರಣ ಪತ್ರ ಹಾಗೂ ಸಂಘದ ಜಿಲ್ಲಾ/ ತಾಲ್ಲೂಕು/ ಯೋಜನಾ ಶಾಖೆ ಅಧ್ಯಕ್ಷರು / ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ಪಡೆದ ದೃಢೀಕರಣ ಪತ್ರ. Ksgea news Blogspot ನಲ್ಲಿ PDF File ಈ ಎಲ್ಲಾ ಲಗತ್ತುಗಳನ್ನು ನಿಗದಿತ JPG format ನಲ್ಲಿ ( 1 mb ಮೀರದಂತೆ) ಅಪ್‌ಲೋಡ್ ಮಾಡುವುದು. ಅರ್ಜಿ ಸಲ್ಲಿಕೆ ಯಶಸ್ವಿಗೊಂಡ ನಂತರ ನೊಂದಾಯಿತ ಇ-ಮೇಲ್‌ಗೆ ಸ್ವೀಕೃತಿ ರವಾನೆಯಾಗಲಿದೆ. ಶೇಕಡವಾರು ಅಂಕಗಳನ್ನು ನಿರ್ಧರಿಸಿ ಅರ್ಜಿಯನ್ನು ಪರಿಗಣಿಸುವ ನಿರ್ಧಾರ ಸಂಘದ್ದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ 080 22354784/83. 9448617400 ಗಳನ್ನು ಸಂಪರ್ಕಿಸುವುದು.

———-