RCB ಕಪ್ ಸಂಭ್ರಮ ದುರಂತ* *ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 10 ಸಾವು* *20 ಕ್ಕೂ ಹೆಚ್ಚಿನ ಜನ ಗಂಭೀರ ಸ್ಥಿತಿಯಲ್ಲಿ…*

*RCB ಕಪ್ ಸಂಭ್ರಮ ದುರಂತ*

*ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 10 ಸಾವು*

*20 ಕ್ಕೂ ಹೆಚ್ಚಿನ ಜನ ಗಂಭೀರ ಸ್ಥಿತಿಯಲ್ಲಿ…*

18ನೇ ಆವೃತ್ತಿಯ ಐಪಿಎಲ್ (IPL) ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರರು ಬೆಂಗಳೂರು (Bengaluru) ನಗರಕ್ಕೆ ಬಂದಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ನಡೆಯಲಿದೆ. ಈ ಸಂಭ್ರಮಾಚರಣೆಯನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದಾರೆ. ಈ ವೇಳೆ ಕಾಲ್ತುಳಿತ ಸಂಭವಿಸಿ 10 ಮಂದಿ ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ.​

ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಆರಕ್ಕೂ ಹೆಚ್ಚು ಆರ್​ಸಿಬಿ ಅಭಿಮಾನಿಗಳ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ​ಲೇಡಿ ಕರ್ಜನ್ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ, ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೂ ದಾಖಲಿಸಾಲಗಿದ್ದ ನಾಲ್ವರು ಆರ್​ಸಿಬಿ ಅಭಿಮಾನಿಗಳು ಸೇರಿದಂತೆ ಒಟ್ಟು 10 ಮಂದಿ ಮೃತಪಟ್ಟಿದ್ದಾರೆ. 10 ಮಂದಿ ಅಭಿಮಾನಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೌರಿಂಗ್​ ಆಸ್ಪತ್ರೆ ಎದುರು ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಸ್ಟೇಡಿಯಂ ಹೊರಗೂ ಜನಸಾಗರವೇ ಸೇರಿದ್ದು ಇದರಿಂದ ಆ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಮುಂದೆ ಹೋಗಲಾಗದೆ ಟ್ರಾಫಿಕ್ ಜಾಮ್ ಉಂಟಾಗಿದೆ. ಜನರನ್ನು ಕಂಟ್ರೋಲ್ ಮಾಡಲು ಸಾಧ್ಯವಾಗದೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ನೂಕುನುಗ್ಗಲಿನಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಪೊಲೀಸರು ತಮ್ಮ ಜೀಪ್​ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದೇ ವೇಳೆ ಗೇಟ್ ನಂಬರ್ 12ರಲ್ಲಿ ಮಹಿಳಾ ಅಭಿಮಾನಿಯೊಬ್ಬರು ಕುಸಿದುಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಇದೇ ವೇಳೆ ಬ್ಯಾರಿಕೇಡ್​ ಬಿದ್ದು ಮೂವರ ಕಾಲು ಮುರಿದಿದೆ. ಆರಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ.

ಚಿತ್ರಗಳು- ಜಿ.ಮಹಾಂತೇಶ್