ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಕಲಿ ಚಿನ್ನದ ಹಗರಣ;* *ಮಂಜುನಾಥ್ ಗೌಡ ಮತ್ತು ಅವರ ಪತ್ನಿಗೆ ಸೇರಿದ 13.91 ಕೋಟಿ ರೂಪಾಯಿ ಮೌಲ್ಯ ಚರ- ಸ್ಥಿರಾಸ್ತಿ ಮುಟ್ಟುಗೋಲು ಮಾಡಿಕೊಂಡ ED*
*ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಕಲಿ ಚಿನ್ನದ ಹಗರಣ;*
*ಮಂಜುನಾಥ್ ಗೌಡ ಮತ್ತು ಅವರ ಪತ್ನಿಗೆ ಸೇರಿದ 13.91 ಕೋಟಿ ರೂಪಾಯಿ ಮೌಲ್ಯ ಚರ- ಸ್ಥಿರಾಸ್ತಿ ಮುಟ್ಟುಗೋಲು ಮಾಡಿಕೊಂಡ ED*
ನವದೆಹಲಿ: ನಕಲಿ ಚಿನ್ನ ಅಡವಿಟ್ಟು 63 ಕೋಟಿ ರೂಪಾಯಿ ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್(Shivamogga DCC Bank) ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥ್ ಗೌಡ ಮತ್ತು ಅವರ ಪತ್ನಿಗೆ ಸೇರಿದ ಸುಮಾರು 14 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ ಎಂದು ಜಾರಿ ನಿರ್ದೇಶನಾಲಯ(ಇಡಿ) ಶುಕ್ರವಾರ ತಿಳಿಸಿದೆ.
ಡಿಸಿಸಿ ಬ್ಯಾಂಕ್ ಹಗರಣ ಸಂಬಂಧ ಇಡಿ ಅಧಿಕಾರಿಗಳು ಕಳೆದ ಏಪ್ರಿಲ್ ನಲ್ಲಿ ಶಿವಮೊಗ್ಗದಲ್ಲಿ ಮಂಜುನಾಥ್ ಗೌಡ ಮನೆ, ಕಚೇರಿ ಸೇರಿದಂತೆ 8 ಕಡೆ ದಾಳಿ ನಡೆಸಿದ್ದರು. ಅಲ್ಲದೇ ಮಂಜುನಾಥ್ ಅವರನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್ ಅತಿಥಿಗೃಹದಲ್ಲಿ ವಿಚಾರಣೆ ನಡೆಸಿದ್ದರು.
ಶಿವಮೊಗ್ಗದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಶಿವಮೊಗ್ಗ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕಿನ ಮಾಜಿ ಅಧ್ಯಕ್ಷರು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಸಹಕಾರಿ ಬ್ಯಾಂಕಿನ ನಗರ ಶಾಖೆಯಲ್ಲಿ ನಡೆದ ಚಿನ್ನದ ಸಾಲ ಹಗರಣಕ್ಕೆ ಸಂಬಂಧಿಸಿದಂತೆ ಮಂಜುನಾಥ್ ಗೌಡ ಮತ್ತು ಅವರ ಪತ್ನಿಗೆ ಸೇರಿದ 13.91 ಕೋಟಿ ರೂಪಾಯಿ ಮೌಲ್ಯದ ಪ್ರಸ್ತುತ ಮಾರುಕಟ್ಟೆ ಮೌಲ್ಯದ ಸ್ಥಿರ ಮತ್ತು ಚರ ಆಸ್ತಿಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ) ಅಡಿಯಲ್ಲಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿದೆ.