ಶಿವಮೊಗ್ಗದಲ್ಲಿ ಪೊಲೀಸರಿಂದ ಶಾಲಾ ವಾಹನ ತಪಾಸಣೆ
*ಶಿವಮೊಗ್ಗದಲ್ಲಿ ಪೊಲೀಸರಿಂದ ಶಾಲಾ ವಾಹನ ತಪಾಸಣೆ
*
ಶಾಲಾ ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ಶಿವಮೊಗ್ಗ ನಗರದ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಶಿವಮೊಗ್ಗ ನಗರದದಾದ್ಯಂತ ವಿವಿಧ ಸ್ಥಳಗಳಲ್ಲಿ ಹಾಗೂ ಪ್ರಮುಖ ವೃತ್ತಗಳಲ್ಲಿ *ಶಾಲೆಗಳಿಗೆ ಮಕ್ಕಳನ್ನು ಕರೆದುಕೊಂಡು ಹೋಗುವ ವಾಹನಗಳನ್ನು ತಪಾಸಣೆ ಮಾಡಿದರು.
ಈ ಸಂದರ್ಭದಲ್ಲಿ ಶಾಲಾ ವಾಹನದ ಚಾಲಕರಿಗೆ ನಿಗದಿತ ಮಿತಿಗಿಂತ ಹೆಚ್ಚಿನ ಮಕ್ಕಳನ್ನು ಕರೆದುಕೊಂಡು ಹೋಗದಂತೆ ಮತ್ತು ಶಾಲಾ ವಾಹನಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಇಟ್ಟುಕೊಳ್ಳುವಂತೆ, ವಾಹನದ ವಿಮೆ, ಎಮಿಷನ್ ರಿಪೋರ್ಟ್ ಹಾಗೂ ಫಿಟ್ನೆಸ್ ಸರ್ಟಿಫಿಕೇಟ್ ಅನ್ನು ಚಾಲ್ತಿಯಲ್ಲಿ ಇರುವಂತೆ ನೋಡಿಕೊಳ್ಳಲು ಸೂಚನೆಗಳನ್ನು ನೀಡಿದರು.
ಕಡ್ಡಾಯವಾಗಿ ಸಂಚಾರ ನಿಯಮಗಳ ಪಾಲಿಸುವಂತೆ ಪೊಲೀಸರು ಅರಿವು ಮೂಡಿಸಿದರು.