ಕರ್ನಾಟಕದ ಕರಾವಳಿ, ಮಲೆನಾಡಿನಲ್ಲೂ ಮಳೆ ಅಬ್ಬರ* ಶಿವಮೊಗ್ಗದಲ್ಲಿ ಆರೇಂಜ್ ಅಲರ್ಟ್
*ಕರ್ನಾಟಕದ ಕರಾವಳಿ, ಮಲೆನಾಡಿನಲ್ಲೂ ಮಳೆ ಅಬ್ಬರ*
ಶಿವಮೊಗ್ಗದಲ್ಲಿ ಆರೇಂಜ್ ಅಲರ್ಟ್
ಕರ್ನಾಟಕದಾದ್ಯಂತ ಮಳೆ(Rain)ಯ ಪ್ರಮಾಣ ಹೆಚ್ಚಾಗಿದ್ದು, ಕೊಡಗಿನಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ತುಮಕೂರು, ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಬೀದರ್ನಲ್ಲಿ ಕೂಡ ಮಳೆಯಾಗಲಿದೆ.
ಕ್ಯಾಸಲ್ರಾಕ್, ಯಲ್ಲಾಪುರ, ಖಾನಾಪುರ, ಲೋಂಡಾ, ಕಿತ್ತೂರು, ಹುಂಚದಕಟ್ಟೆ, ಕಮ್ಮರಡಿ, ಆಗುಂಬೆ, ಶೃಂಗೇರಿ, ಕಳಸ, ಸೋಮವಾರಪೇಟೆ, ಕೊಪ್ಪ, ನಾಪೋಕ್ಲುವಿನಲ್ಲಿ ಭಾರಿ ಮಳೆಯಾಗಿದೆ. ಬೆಳ್ತಂಗಡಿ,ಮೂಡುಬಿದಿರೆ, ಧರ್ಮಸ್ಥಳ, ಕೊಟ್ಟಿಗೆಹಾರ, ಕದ್ರಾ, ಸುಳ್ಯ, ಬಂಟವಾಳ, ಮಂಗಳೂರು, ಹಳಿಯಾಳ, ಜಯಪುರ, ಪೊನ್ನಂಪೇಟೆ, ಪಣಂಬೂರು, ಜೋಯ್ಡಾ, ಎನ್ಆರ್ಪುರ್, ಪುತ್ತೂರು, ನಿಪ್ಪಾಣಿ, ಹಿಡಕಲ್, ಕುಂದಾಪುರ್, ಶಿಗ್ಗಾಂವ್, ಸಂಕೇಶ್ವರ್, ಸೇಡಂ, ಸೈದಾಪುರ, ಕಮಲಾಪುರ, ದೇವರಹಿಪ್ಪರಗಿ, ಬೈಲಹೊಂಗಲ, ಮುದ್ದೇಬಿಹಾಳ, ಹುಬ್ಬಳ್ಳಿ, ಮಹಾಲಿಂಗಪುರ, ಭದ್ರಾವತಿ, ಎಚ್ಡಿ ಕೋಟೆ, ಸರಗೂರು, ಕೋಣನೂರು, ಕುಶಾಲ್ನಗರ, ತ್ಯಾಗರ್ತಿಯಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕೆಐಎಎಲ್ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿಯಲ್ಲಿ 23.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಬೀದರ್ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 24.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪದಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.