ರಾಗುಗುಡ್ಡದ ನಾಗಬನ ವಿವಾದ;* *ಇಬ್ಬರು ಅರೆಸ್ಟ್* *ಶಿವಮೊಗ್ಗ ಜಿಲ್ಲಾ ಎಸ್ ಪಿ ಮಿಥುನ್ ಕುಮಾರ್ ಹೇಳುವುದೇನು?* *ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಚನ್ನಬಸಪ್ಪ ಹೇಳಿದ್ದೇನು?*
*ರಾಗುಗುಡ್ಡದ ನಾಗಬನ ವಿವಾದ;*
*ಇಬ್ಬರು ಅರೆಸ್ಟ್*
*ಶಿವಮೊಗ್ಗ ಜಿಲ್ಲಾ ಎಸ್ ಪಿ ಮಿಥುನ್ ಕುಮಾರ್ ಹೇಳುವುದೇನು?*
*ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಚನ್ನಬಸಪ್ಪ ಹೇಳಿದ್ದೇನು?*

ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ರಾಗಿಗುಡ್ಡ ಬಳಿಯ ಬಂಗಾರಪ್ಪ ಲೇಔಟ್‌ನಲ್ಲಿ ನಾಗರ ವಿಗ್ರಹ ಸ್ಥಳಾಂತರಗೊಂಡ ಘಟನೆ ನಡೆದಿದೆ.
ನಿರ್ಮಾಣ ಹಂತದಲ್ಲಿರುವ ವಕೀಲ ಸಿದ್ದೀಖ್ ರವರ ಮನೆಯ ಮುಂದೆ ಸುಮಾರು 1000 ಚದರ ಅಡಿ ವಿಸ್ತೀರ್ಣದ ತೆರೆದ ಉದ್ಯಾನವನವಿದೆ. ಒಬ್ಬ ಮೇಸ್ತ್ರಿ ಮನೆ ನಿರ್ಮಾಣವನ್ನು ನೋಡಿಕೊಳ್ಳುತ್ತಾನೆ.
ಸ್ಥಳೀಯರು ಮೇಸ್ತ್ರಿ ಸ್ನೇಹಿತ ನಾಗರ ವಿಗ್ರಹವನ್ನು ಸ್ಥಳಾಂತರಗೊಳಿಸಿ ಎಸೆದಿದ್ದಾರೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ನಾನು ಸ್ಥಳಕ್ಕೆ ಹೋಗಿ ಪರಿಶೀಲಿಸಿದೆ. ವಿಗ್ರಹವು ಅದೇ ಸ್ಥಳದಲ್ಲಿದೆ. ಆದರೆ, ಅದನ್ನು ಸಿಮೆಂಟ್ ನೆಲಕ್ಕೆ ಅಂಟಿಸಿದ ಅಂಟು ಸಡಿಲಗೊಂಡಿದೆ ಎಂದು ಎಸ್ ಪಿ ಮಿಥುನ್ ಕುಮಾರ್ ಸ್ಪಷ್ಟೀಕರಣ ನೀಡಿದ್ದಾರೆ.
ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡು ಆರೋಪಿಗಳನ್ನು ಪತ್ತೆ ಮಾಡಲಾಗಿದೆ. ನಿಖರವಾಗಿ ಏನಾಯಿತು ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಎಸ್ ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆದಿದ್ದು ಪ್ರಕರಣವನ್ನೂ ದಾಖಲಿಸಲಾಗಿದೆ.ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಪರಿಶೀಲಿಸದೇ ಊಹಾಪೋಹದ ಸುದ್ದಿ ಪೋಸ್ಟ್ ಮಾಡಬೇಡಿ ಎಂದು ವಿನಂತಿಸುತ್ತೇನೆ ಎಂದು ಮಿಥುನ್ ಕುಮಾರ್ ಕೋರಿದ್ದಾರೆ.
*ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ, ಕಠಿಣ ಕ್ರಮಕ್ಕೆ ಸೂಚನೆ!*
ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ನಡೆದ ಗಣಪತಿ ಮತ್ತು ನಾಗರ ವಿಗ್ರಹ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಶಿವಮೊಗ್ಗ ನಗರ ಶಾಸಕರಾದ ಚನ್ನಬಸಪ್ಪನವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕೃತ್ಯದ ಹಿಂದಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ರಕ್ಷಣಾ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.
ಘಟನೆಯ ಕುರಿತು ಸ್ಥಳೀಯರೊಂದಿಗೆ ಮಾತನಾಡಿದ ಶಾಸಕ ಚನ್ನಬಸಪ್ಪನವರಿಗೆ ಆಘಾತಕಾರಿ ಮಾಹಿತಿ ಲಭ್ಯವಾಗಿದೆ. ದ್ವಂಸಗೊಳಿಸಲಾದ ದೇವರ ವಿಗ್ರಹಗಳ ಎದುರು ಭಾಗದಲ್ಲಿರುವ ಅನ್ಯಕೋಮಿನ ಮನೆ ಅಕ್ರಮವಾಗಿ ನಿರ್ಮಿಸಿದ್ದು, ಆ ಮನೆಯ ನಿವಾಸಿಗಳು ಪ್ರತಿದಿನ ಬೆಳಗ್ಗೆ ಎದ್ದ ಕೂಡಲೇ ಈ ದೇವರ ವಿಗ್ರಹಗಳನ್ನು ನೋಡಬೇಕಾಗುತ್ತದೆ ಎಂಬ ಕಾರಣಕ್ಕೆ ಈ ಕೃತ್ಯ ಎಸಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, “ಅವರಿಗೆ ತೊಂದರೆಯಾದರೆ, ಅವರು ಈ ಭಾಗದಲ್ಲಿ ವಾಸಿಸಲು ಅರ್ಹರಲ್ಲ” ಎಂದು ಖಾರವಾಗಿ ನುಡಿದರು.
ತಕ್ಷಣವೇ ಕಾರ್ಯಪ್ರವೃತ್ತರಾದ ಶಾಸಕ ಚನ್ನಬಸಪ್ಪನವರು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಿಗೆ ದೂರವಾಣಿ ಕರೆ ಮಾಡಿ, ಅಕ್ರಮವಾಗಿ ನಿರ್ಮಿಸಲಾದ ಮನೆಯ ದಾಖಲಾತಿಗಳನ್ನು ಪರಿಶೀಲಿಸಿ, ಅದು ಅಕ್ರಮವಾಗಿದ್ದರೆ ತಕ್ಷಣವೇ ತೆರವುಗೊಳಿಸುವಂತೆ ಸೂಚನೆ ನೀಡಿದರು. ಅಲ್ಲದೆ, ಬಂಗಾರಪ್ಪ ಬಡಾವಣೆಯಲ್ಲಿ ವಾಸಿಸುತ್ತಿರುವ ಹಿಂದೂ ಜನಗಳಿಗೆ ಸೂಕ್ತ ಭದ್ರತೆಯನ್ನು ಒದಗಿಸುವಂತೆಯೂ ಪೊಲೀಸ್ ಇಲಾಖೆಗೆ ತಿಳಿಸಿದರು.
ಈ ಸಂದರ್ಭದಲ್ಲಿ, ಬಿಜೆಪಿ ನಗರ ಅಧ್ಯಕ್ಷರಾದ ಮೋಹನ್ ರೆಡ್ಡಿ, ಪ್ರಧಾನ ಕಾರ್ಯದರ್ಶಿಗಳಾದ ದೀನದಯಾಳು, ಮಂಜುನಾಥ್ ಕೆ ನವಲೆ, ಮಾಧ್ಯಮ ಸಂಚಾಲಕ ಶ್ರೀನಾಗ, ಸ್ಥಳೀಯ ಪ್ರಮುಖರು, ಮತ್ತು ಬಂಗಾರಪ್ಪ ಬಡಾವಣೆಯ ನಿವಾಸಿಗಳು ಉಪಸ್ಥಿತರಿದ್ದರು.
ಈ ಘಟನೆ ಸ್ಥಳೀಯ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಮತ್ತು ಅಕ್ರಮ ನಿರ್ಮಾಣಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.